Advertisement

ಮಹರ್ಷಿ ವಾಲ್ಮೀಕಿ ಆದರ್ಶ ಪಾಲಿಸಿ

08:12 PM Nov 01, 2020 | Suhan S |

ಚಿತ್ರದುರ್ಗ: ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಕರೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಆದಿಕವಿ ಮಹರ್ಷಿ ವಾಲ್ಮೀಕಿಯವರು ಮಹಾಕಾವ್ಯ ರಾಮಾಯಣದ ಮೂಲಕ ಬದುಕಿನಲ್ಲಿ ಇರಬೇಕಾದ ಆದರ್ಶಗಳನ್ನು ವಿವರಿಸಿದ್ದಾರೆ. ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಬಾರದು. ಆಚರಣೆಗಳಿಂದ ನಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿದಾರಿಗೆ ಹೋಗುವ ಪ್ರಯತ್ನ ಮಾಡಬೇಕು. ರಾಮಾಯಣದಲ್ಲಿ ಹೇಳಿರುವಂತೆ ರಾಮರಾಜ್ಯ ನಿರ್ಮಾಣವಾಗಬೇಕು. ಇದಕ್ಕೆ ನಾವೆಲ್ಲರೂ ಪರಿಶ್ರಮ ಹಾಕಬೇಕಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ ಮಾತನಾಡಿ, ವಾಲ್ಮೀಕಿ ರಚಿಸಿದ ರಾಮಾಯಣ ಎಂಬ ಮಹಾನ್‌ ಗ್ರಂಥಕ್ಕೆ ದೇಶ ಮಾತ್ರವಲ್ಲದೆ ಇಡೀ ಜಗತ್ತಿನಲ್ಲಿ ಮಹತ್ವ ಲಭಿಸಿದೆ. ರಾಮಾಯಣ ಮನುಕುಲಕ್ಕೆ ಮಾರ್ಗದರ್ಶನ ನೀಡುವ ಗ್ರಂಥವಾಗಿದ್ದು, ಅದರಲ್ಲಿರುವ ಸಂದೇಶಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ ಮಾತನಾಡಿ, ವಾಲ್ಮೀಕಿಯವರು ನಾಡು, ದೇಶಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಭಾರತ ದೇಶದ ಸಂಸ್ಕೃತಿಯನ್ನುಪರಿಚಯಿಸಿಕೊಟ್ಟಿದ್ದಾರೆ. ರಾಮಾಯಣ ಮಹಾಕಾವ್ಯ ಶ್ರೇಷ್ಠವಷ್ಟೇ ಅಲ್ಲ, ಅದನ್ನು ಬರೆದ ವ್ಯಕ್ತಿಯ ಬದುಕು ಸಹ ಶ್ರೇಷ್ಠವಾಗಿದೆ. ವಾಲ್ಮೀಕಿ ಅವರ ಆದರ್ಶಗಳು ನಮಗೆ ದಾರಿದೀಪವಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ತಹಶೀಲ್ದಾರ್‌ ವೆಂಕಟೇಶಯ್ಯ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಟಿ. ಪರಮೇಶ್ವರಪ್ಪ ಸೇರಿದಂತೆ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಭಾಗವಹಿಸಿದ್ದರು.

Advertisement

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ನಮ್ಮೆಲ್ಲರ ಜೀವನದ ಆದರ್ಶಕ್ಕೆ ಅಡಿಪಾಯವಾಗಿದೆ. ಜಯಂತಿಯ ನೆಪದಲ್ಲಿ ಅವರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಟಿ. ಬದರಿನಾಥ್‌, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧಕ್ಷ

Advertisement

Udayavani is now on Telegram. Click here to join our channel and stay updated with the latest news.

Next