ರಾಂಚಿ: ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದೆ. ಶುಕ್ರವಾರ ರಾಂಚಿಯಲ್ಲಿ ನಡೆದ ಎರಡನೇ ಪಂದ್ಯವನ್ನು ಗೆದ್ದ ಭಾರತ ತಂಡ ಸರಣಿಯಲ್ಲಿ ಒಂದು ಪಂದ್ಯ ಬಾಕಿ ಉಳಿದಿರುವಂತೆ ಸರಣಿ ವಶಪಡಿಸಿಕೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಕಿವೀಸ್ ತಂಡಕ್ಕೆ ಮಾರ್ಟಿನ್ ಗಪ್ಟಿಲ್ ಮತ್ತು ಡ್ಯಾರೆಲ್ ಮಿಚೆಲ್ ಉತ್ತಮ ಆರಂಭ ಒದಗಿಸಿದ್ದರು. ಬಿರುಸಿನ ಬ್ಯಾಟಿಂಗ್ ಮಾಡಿದ ಗಪ್ಟಿಲ್ ಕೇವಲ 15 ಎಸೆತದಲ್ಲಿ 31 ರನ್ ಚಚ್ಚಿದರು.
ಇದೇ ವೇಳೆ ಗಪ್ಟಿಲ್ ಹೊಸ ದಾಖಲೆಯೊಂದನ್ನು ಬರೆದರು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಹೊಸ ದಾಖಲೆ ಮಾಡಿದರು. ಈ ಹಿಂದೆ ವಿರಾಟ್ ಕೊಹ್ಲಿ ಹೆಸರಲ್ಲಿದ್ದ ದಾಖಲೆಯನ್ನು ಗಪ್ಟಿಲ್ ರಾಂಚಿ ಪಂದ್ಯದಲ್ಲಿ ತಮ್ಮ ಹೆಸರಿಗೆ ಮಾಡಿಕೊಂಡರು.
ಇದನ್ನೂ ಓದಿ:ಜಲಪಾತದ ವಿಡಿಯೋ ತೆಗೆಯುವಾಗ ಕೊಚ್ಚಿ ಹೋದ ಡ್ರೋನ್ ಕ್ಯಾಮರಾ
ಮಾರ್ಟಿನ್ ಗಪ್ಟಿಲ್ ಸದ್ಯ 3248 ರನ್ ಗಳಿಸಿದ್ದರೆ, ವಿರಾಟ್ ಕೊಹ್ಲಿ 3227 ರನ್ ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಅವರು 3141 ರನ್ ಗಳಿಸಿದ್ದಾರೆ.
ರಾಂಚಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿದರೆ, ಭಾರತ ತಂಡ 17.2 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.