ನವದೆಹಲಿ:ದೇಶದ ಅತೀ ದೊಡ್ಡ ಕಾರು ತಯಾರಿಕಾ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ತನ್ನ ಎಲ್ಲಾ ಮಾದರಿಯ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಬುಧವಾರ (ಏಪ್ರಿಲ್ 06) ತಿಳಿಸಿದೆ.
ಇದನ್ನೂ ಓದಿ:ಚಂದ್ರು ಕೊಲೆ : ವಿವಾದದ ಬಳಿಕ ‘ನನ್ನಿಂದ ತಪ್ಪು ಹೇಳಿಕೆ’ ಎಂದ ಆರಗ ಜ್ಞಾನೇಂದ್ರ
ಕಳೆದ ಒಂದು ವರ್ಷದಿಂದ ಆಂತರಿಕ ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿರುವುದರಿಂದ ಕಾರು ತಯಾರಿಕೆಯ ವೆಚ್ಚದ ಮೇಲೆ ಪರಿಣಾಮ ಬೀರುತ್ತಿದ್ದು, ಇದರಿಂದಾಗಿ ಕಾರುಗಳ ಬೆಲೆ ಹೆಚ್ಚಳ ಮಾಡಲು ನಿರ್ಧರಿಸಿರುವುದಾಗಿ ಮಾರುತಿ ಸುಜುಕಿ ಇಂಡಿಯಾ ಹೇಳಿದೆ.
ಏಪ್ರಿಲ್ ತಿಂಗಳಿನಲ್ಲಿ ಎಲ್ಲಾ ಶ್ರೇಣಿಯ ಕಾರುಗಳ ಬೆಲೆ ಏರಿಕೆಯಾಗಲಿದೆ. ಆಂತರಿಕ ಉತ್ಪನ್ನಗಳ ವೆಚ್ಚ ಹೆಚ್ಚಳವಾಗಿದ್ದು, ಇದರಿಂದ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೇರುವುದು ಅನಿರ್ವಾಯವಾಗಿದೆ ಎಂದು ಕಂಪನಿ ತಿಳಿಸಿದೆ.
ಆದರೆ ವಿವಿಧ ಮಾದರಿಯ ಕಾರುಗಳ ಬೆಲೆಯನ್ನು ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಕಂಪನಿ ಬಹಿರಂಗಗೊಳಿಸಿಲ್ಲ. ನಿರಂತರವಾಗಿ ಆಂತರಿಕ ಉತ್ಪನ್ನಗಳ ಬೆಲೆ ಹೆಚ್ಚಳದಿಂದಾಗಿ ಮಾರುತಿ ಸುಜುಕಿ 2021ರ ಜನವರಿಯಿಂದ 2022ರ ಮಾರ್ಚ್ ವರೆಗೆ ಶೇ.8.8ರಷ್ಟು ಬೆಲೆ ಏರಿಕೆ ಮಾಡಿರುವುದಾಗಿ ವರದಿ ವಿವರಿಸಿದೆ.