Advertisement

ಪೊಲೀಸ್ ಸ್ಟೇಷನ್ ನೊಳಗೊಂದು ಕಹಾನಿ; ಮಾರ್ಚ್ 10ಕ್ಕೆ ‘ಮೇರಿ’ ರಿಲೀಸ್

02:56 PM Feb 26, 2023 | Team Udayavani |

“ಮೇರಿ’- ಹೀಗೊಂದು ಸಿನಿಮಾ ಸದ್ದಿಲ್ಲದೇ ಬಿಡುಗಡೆಯ ಹಂತಕ್ಕೆ ಬಂದಿದ್ದು, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರ ಫೆ.24 ರಂದು ತೆರೆಕಾಣಬೇಕಿತ್ತು. ಆದರೆ, ಈಗ ಚಿತ್ರ ಮಾರ್ಚ್‌ 10ರಂದು ತೆರೆಕಾಣುತ್ತಿದೆ. “ಆನ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ಮನೋಜ್‌ ಪಿ ನಡಲುಮನೆ ನಿರ್ದೇಶನದ ಎರಡನೇ ಸಿನಿಮಾವಿದು.

Advertisement

“ಮೇರಿ’ ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ವಿಕಾಶ್‌ ಉತ್ತಯ್ಯ, ಅನೂಷ ಕೃಷ್ಣ, ಚೇತನ್‌ ವಿಕ್ಕಿ, ತೇಜಸ್ವಿನಿ ಶರ್ಮಾ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಸಂದೀಪ್‌ ನೀನಾಸಂ, ಭಾರ್ಗವ್‌ ವೆಂಕಟೇಶ್‌, ಸುಶಾಂತ್‌, ದೀಪಕ್‌ ಗೌಡ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ.

ನಿರ್ದೇಶಕ ಮನೋಜ್‌ ಪಿ ನಡುಲುಮನೆ ಮಾತನಾಡಿ “ಮೇರಿ’ ಒಂದು ತಂಡದ ಪರಿಶ್ರಮ. ಥ್ರಿಲ್ಲರ್‌ ಸಬ್ಜೆಕ್‌ ಒಳಗೊಂಡ ಸಿನಿಮಾ. ಪೊಲೀಸ್‌ ಠಾಣೆಯಲ್ಲಿ ನಡೆಯುವ ಘಟನೆ ಚಿತ್ರದಲ್ಲಿದೆ. ಚಿಕ್ಕಮಗಳೂರಿನ ಜಿಲ್ಲೆಯ ಕಾಡು ಮಧ್ಯದಲ್ಲಿರುವ ಒಂದು ಗ್ರಾಮದ ಪೊಲೀಸ್‌ ಠಾಣೆಗೆ ಹೊಸದಾಗಿ ನಿಯೋಜನೆಯಾದ ಎಸ್‌ಐ ಮುಂದೆ ಒಂದು ಹುಡುಗಿ ತನ್ನ ಮೇಲೆ ರೇಪ್‌ ಆಗಿದೆ ಎಂದು ಹೇಳಿದಾಗ ಆ ದಿನ ಏನೇನು ಘಟನೆ ನಡೆಯುತ್ತೆ ಅನ್ನೋದು ಈ ಸಿನಿಮಾದ ಎಳೆ’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ.

ನಟ ವಿಕಾಶ್‌ ಉತ್ತಯ್ಯ, ನಟಿಯರಾದ ತೇಜಸ್ವಿನಿ ಶರ್ಮಾ, ನಟಿ ಅನೂಷ ಕೃಷ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ. ನಟಿ ತೇಜಸ್ವಿನಿ ಶರ್ಮಾ ಮಾತನಾಡಿ ನನ್ನ ಪಾತ್ರ ಸಿನಿಮಾ ರಿಲೀಸ್‌ ಆದ ಮೇಲೆ ಮಾತನಾಡುವ ಹಾಗಿದೆ. ನನ್ನ ಪಾತ್ರ ತುಂಬಾ ವಿಭಿನ್ನವಾಗಿದೆ ಎಂದು ಸಿನಿಮಾ ಬಗ್ಗೆ ಖುಷಿ ವ್ಯಕ್ತಪಡಿಸಿದರು

Advertisement

Udayavani is now on Telegram. Click here to join our channel and stay updated with the latest news.

Next