ಉಡುಪಿ/ ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಆಡಳಿತವು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದೆ ಮಾತ್ರವಲ್ಲದೇ ನಿಯಮ ಪಾಲಿಸದವರ ವಿರುದ್ಧ ದಂಡ ವಿಧಿಸುವ ಕಟ್ಟುನಿಟ್ಟಿನ ಕಾರ್ಯಕ್ಕೆ ಮುಂದಾಗಿದೆ.
Advertisement
ನಮ್ಮ ಕುಟುಂಬ ಮತ್ತು ಸಮಾಜದ ಸುರಕ್ಷತೆ ನಮ್ಮ ಕೈಯಲ್ಲಿದೆ. ಈ ಕಾರಣ ಕ್ಕಾಗಿ ಮನೆಯಿಂದ ಹೊರಬರುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ರೂಢಿಸಿಕೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ವತಃ ಕಾರ್ಯಾಚರಣೆಗೆ ಇಳಿದಿದ್ದು ನಿಯಮ ಉಲ್ಲಂ ಸಿದವರಿಗೆ ದಂಡ ವಿಧಿಸುತ್ತಿದ್ದಾರೆ.
ಇದುವರೆಗೆ ಉಭಯ ಜಿಲ್ಲೆಗಳಲ್ಲಿ 12 ಲಕ್ಷ ರೂ. ಸಂಗ್ರಹಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ 3,246 ಮಂದಿಗೆ ದಂಡ ವಿಧಿಸಲಾಗಿದ್ದರೆ 4,41,679 ರೂ. ದಂಡ ಸಂಗ್ರಹಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 7.5 ಲಕ್ಷ ರೂ. ಸಂಗ್ರಹಿಸಲಾಗಿದೆ. ಎಲ್ಲೆಲ್ಲಿ ಮಾಸ್ಕ್ ಧರಿಸಬೇಕು?
ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್‌ಗಳಲ್ಲಿ ಮಾತ್ರವಲ್ಲದೆ ವೈಯಕ್ತಿಕವಾಗಿ ಕಾರಿನಲ್ಲಿ ಪ್ರಯಾಣಿಸುವಾಗ, ಬೈಕಿನಲ್ಲಿ ಸವಾರಿ ಮಾಡುವಾಗಲೂ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು.
Related Articles
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ವಿಧಿಸುವ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1,000 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 500 ರೂ.ಗೆ ಹೆಚ್ಚಿಸಲು ಸರಕಾರ ನಿರ್ಧರಿಸಿದೆ. ಮುಂದಿನ ದಿನದಲ್ಲಿ 100ರೂ. ಬದಲಾಗಿ 1,000 ರೂ. ದಂಡ ಪಾವತಿ ಮಾಡ
ಬೇಕಾಗುತ್ತದೆ.
Advertisement
ಕೊರೊನಾವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜನಸಾಮಾನ್ಯರು ಸಹಕರಿಸಬೇಕು. ಮನೆಯಿಂದ ಹೊರಬರುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ರೂಢಿಸಿಕೊಳ್ಳಬೇಕು. ನಮ್ಮ, ನಮ್ಮ ಕುಟುಂಬ ಮತ್ತು ಸಮಾಜದ ಸುರಕ್ಷತೆ ನಮ್ಮ ಕೈಯಲ್ಲಿದೆ ಎಂಬುದನ್ನು ಮರೆಯಬಾರದು.ಡಾ| ಕೆ.ವಿ. ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ ಟ್ರೇಡ್ ಪರವಾನಿಗೆ ರದ್ದು
ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡಬೇಕು. ಮೂಗಿನ ಕೆಳಗೆ ಮಾಸ್ಕ್ ಹಾಕಿ ತಿರುಗಾಡಿದರೆ ಅವರಿಗೂ ದಂಡ ವಿಧಿಸಲಾಗುತ್ತದೆ. ಅಂಗಡಿ ಹಾಗೂ ಹೊಟೇಲ್ ಮಾಲಕರು ಮಾಸ್ಕ್ ಹಾಕದೆ ಇರುವುದು ಕಂಡು ಬಂದರೆ ಟ್ರೇಡ್ ಪರವಾನಿಗೆ ರದ್ದುಗೊಳಿಸಲಾಗುತ್ತದೆ.
-ಜಿ.ಜಗದೀಶ್, ಜಿಲ್ಲಾಧಿಕಾರಿ, ಉಡುಪಿ.