Advertisement

ಮಾಸ್ಕ್ ಡೇ ದಿನದ ಮಹತ್ವ ಅರಿಯಿರಿ

07:50 AM Jun 19, 2020 | Suhan S |

ಚಿಕ್ಕಮಗಳೂರು: ಸಮಾಜವನ್ನು ಕೋವಿಡ್ ಸೋಂಕು ಮುಕ್ತವಾಗಿಸುವ ಉದ್ದೇಶದಿಂದ ಸರ್ಕಾರ ಜೂ.18ನ್ನು ಮಾಸ್ಕ್ ಡೇ ದಿನವನ್ನಾಗಿ ಆಚರಿಸುತ್ತಿದ್ದು ಇದರ ಮಹತ್ವವನ್ನು ಪ್ರತಿಯೊಬ್ಬರು ಅರಿತು ಕೋವಿಡ್ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಸವರಾಜ್‌ ಚೇಂಗಟಿ ಕರೆ ನೀಡಿದರು.

Advertisement

ಗುರುವಾರ ನಗರದ ತಾಪಂ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ ಮಾಸ್ಕ್ ಡೇ ದಿನದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನದಂತೆ ಜೂ.18ನ್ನು ಮಾಸ್ಕ್ ದಿನವನ್ನಾಗಿ ರಾಜ್ಯಾದ್ಯಾಂತ ಆಚರಿಸಲಾಗುತಿದ್ದು, ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಮಾಸ್ಕ್, ಸ್ಯಾನಿಟೈಸರ್‌ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಉಮೇಶ್‌ ಮಾತನಾಡಿ, ಕೋವಿಡ್ ಸೋಂಕಿನಿಂದ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ಸರ್ಕಾರ ಇಂದು ರಾಜ್ಯದೆಲ್ಲೆಡೆ ಮಾಸ್ಕ್ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ, ಆರೋಗ್ಯಾಧಿಕಾರಿ ಡಾ| ಭರತ್‌, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಅಶ್ವಥ್‌ ಬಾಬು, ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಗೀತಾ, ತಾಲೂಕು ಆರೋಗ್ಯಾಧಿಕಾರಿ ಸೀಮಾ, ಹಾಗೂ ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯಾಧಿಕಾರಿಗಳು ಇದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next