Advertisement

ಕೋವಿಡ್ – 19 ಶ್ರಮಿಕರಿಗೆ ಮಾಸ್ಕ್ ವಿತರಣೆ

12:43 PM Apr 16, 2020 | mahesh |

ಮಳವಳ್ಳಿ: ಕೋವಿಡ್ – 19 ಸೋಂಕಿನಿಂದ ಸಂಕಷ್ಟದಲ್ಲಿರುವವರಿಗೆ ಹಾಗೂ ಸೋಂಕು ತಡೆಯಲು ಶ್ರಮಿಸುತ್ತಿರುವ ಸಿಬ್ಬಂದಿಗೆ ತಾಲೂಕು ಆಡಳಿತ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಸುರಕ್ಷತಾ ಸಾಧನಗಳನ್ನು ವಿತರಿಸಲಾಯಿತು.

Advertisement

ಪಟ್ಟಣದ ಕೋಟೆ ಕಾಳಮ್ಮ ಬೀದಿಯಲ್ಲಿ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್‌ ಮತ್ತು ಸೋಪು ಶಾಸಕ ಡಾ.ಅನ್ನದಾನಿ ವಿತರಿಸಿ ಮಾತನಾಡಿ, ಕೋವಿಡ್ – 19 ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ವೈದ್ಯರು, ಪೊಲೀಸರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಆರೋಗ್ಯದ ದೃಷ್ಟಿಯಿಂದ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ವಿವಿಧ ಸೌಲಭ್ಯ ನೀಡುತ್ತಿದ್ದು, ಪಟ್ಟಣದಲ್ಲಿ 7 ಕೋವಿಡ್ – 19 ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈದ್ಗಾ ಮೊಹಲ್ಲಾ ಪ್ರದೇಶ ಮತ್ತು ಕೋಟೆ ಕಾಳಮ್ಮ ಬೀದಿಯನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಿ ಹಲವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಅಲ್ಲದೇ ವಿಶೇಷಾಧಿಕಾರಿಯೊಬ್ಬರನ್ನು ನೇಮಿಸಿ ಸೋಂಕು ತಡೆಯಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಮಂಡ್ಯ ರೆಡ್‌ಕ್ರಾಸ್‌ ಸಂಸ್ಥೆ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ರಾಜೇಶ್‌, ನಾಗೇಂದ್ರ, ಮಾದಹಳ್ಳಿ ಮರಿಸ್ವಾಮಿ ಹಾಗೂ ರೆಡ್‌ ಸಂಸ್ಥೆಯ ನಿರ್ದೇಶಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next