Advertisement

ಕಡ್ಡಾಯ ಮಾಸ್ಕ್ ಧಾರಣೆ ಅವಶ್ಯ: ಶೆಟ್ಟರ

09:54 AM Jun 19, 2020 | Suhan S |

ಹುಬ್ಬಳ್ಳಿ: ಕೋವಿಡ್ ವೈರಸ್‌ ವಿರುದ್ಧ ದೇಶ ಹೋರಾಟ ನಡೆಸುತ್ತಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಕೈ ತೊಳೆದುಕೊಳ್ಳುವುದನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು.

Advertisement

ಚನ್ನಮ್ಮ ವೃತ್ತದಲ್ಲಿ ಜಿಲ್ಲಾಡಳಿತ, ಹುಬ್ಬಳ್ಳಿ ತಾಲೂಕಾಡಳಿತ, ಮಹಾನಗರ ಪಾಲಿಕೆ ಆಶ್ರಯದಲ್ಲಿ ಮಾಸ್ಕ್ ಬಳಕೆಯ ಕುರಿತು ಜನಜಾಗೃತಿಗಾಗಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ವೈರಸ್‌ ಹೊಡೆದೋಡಿಸುವ ನಿಟ್ಟಿನಲ್ಲಿ ದೇಶ ಮಹತ್ತರ ಪಾತ್ರ ವಹಿಸಿದ್ದು, ಇನ್ನು ಕೂಡಾ ನಾವು ಎಚ್ಚರದಿಂದಿರಬೇಕಾಗಿದೆ ಎಂದರು.

ಕೋವಿಡ್ ಬಗ್ಗೆ ಅನಗತ್ಯ ಭಯ ಬೇಡ, ಆದರೆ ಎಚ್ಚರಿಕೆಯಿಂದ ಇರಬೇಕು. ದೇಶದಲ್ಲಿ ಕೋವಿಡ್ ಹರಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಮಿತ್ತ ಮಾಸ್ಕ್ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದಾರೆ. ವೈರಾಣು ತಕ್ಷಣವೇ ನಾಶವಾಗುವುದಿಲ್ಲ. ದಿನನಿತ್ಯದ ಜೀವನದಲ್ಲಿ ಹಲವು ಬದಲಾವಣೆ ಮಾಡಿಕೊಳ್ಳುವುದರ ಮೂಲಕ ವೈರಾಣು ವಿರುದ್ಧ ಹೋರಾಡಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಾಳಿತ ಹಾಗೂ ಆಡಳಿತ ವರ್ಗ ತುಂಬಾ ಉತ್ತಮ ಕಾರ್ಯ ಮಾಡಿದೆ ಎಂದು ಹೇಳಿದರು.

ದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. 130 ಕೋಟಿ ಜನರಿರುವ ದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾಡಲು ಸರ್ಕಾರಕ್ಕೆ ಕಷ್ಟಸಾಧ್ಯ. ಜನರು ತಾವೇ ಅರಿತು ಇದನ್ನು ಪಾಲಿಸಬೇಕು. ಸರ್ಕಾರದ ನಿರ್ದೇಶನದಂತೆ ಕೋವಿಡ್‌ ಲಕ್ಷಣ ಕಂಡುಬರುವ ರೋಗಿಗಳಿಗೆ ಮಾತ್ರ ಕೊವೀಡ್‌ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಜನಜಾಗೃತಿ ಜಾಥಾ ಕಿತ್ತೂರು ಚನ್ನಮ್ಮ ವೃತ್ತದ ಮೂಲಕ ಲ್ಯಾಮಿಂಗ್ಟನ್‌ ರಸ್ತೆ, ಅಂಬೇಡ್ಕರ್‌ ಸರ್ಕಲ್‌, ಕೊಪ್ಪಿಕರ ರಸ್ತೆ, ಬ್ರಾಡ್‌ವೇ ಮೂಲಕ ದುರ್ಗದ ಬಯಲಿನಲ್ಲಿ ಸಂಚರಿಸಿತು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾಧಿಕಾರಿ ದೀಪಾ ಚೋಳನ್‌, ಮಹಾನಗರ ಪೊಲೀಸ್‌ ಆಯುಕ್ತ ಆರ್‌.ದಿಲೀಪ್‌, ಉಪವಿಭಾಗಾ ಧಿಕಾರಿ ಮಹ್ಮದ್‌ ಜುಬೇರ್‌, ಪಾಲಿಕೆ ಉಪ ಆಯುಕ್ತ ಅಜೀಜ್‌ ದೇಸಾಯಿ, ಡಿಎಚ್‌ಒ ಯಶವಂತ ಮದೀನಕರ್‌, ಹುಬ್ಬಳ್ಳಿ ಶಹರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಗ್ರಾಮೀಣ ತಹಶೀಲ್ದಾರ್‌ ಪ್ರಕಾಶ ನಾಸಿ, ಪಾಲಿಕೆ ಆರೋಗ್ಯಾಧಿಕಾರಿ ಡಾ| ಪ್ರಭು ಬಿರಾದಾರ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next