Advertisement
ಗುರುವಾರ ರಾಜ್ಯಾದ್ಯಂತ ಮಾಸ್ಕ್ ದಿನಾಚರಣೆ ಕೈಗೊಂಡ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತದ ವತಿಯಿಂದ ಜಾಗೃತಿ ಕಾರ್ಯಕ್ರಮ ನಗರದಲ್ಲಿ ಜರಗಿತು.
Related Articles
ಮೂಡುಬಿದಿರೆ: ಕೋವಿಡ್-19 ಸೋಂಕು ನಿಯಂತ್ರಿಸಲು ಎಲ್ಲರೂ ಮಾಸ್ಕ್ ಧರಿಸಬೇಕು; ಅಂತರ ಕಾಪಾಡಿಕೊಳ್ಳುವ ಜತೆಗೆ ಆಗಾಗ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈಗಳನ್ನು ತೊಳೆದುಕೊಳ್ಳುವುದು ಅಗತ್ಯ ಎಂದು ತಹಶೀಲ್ದಾರ್ ಅನಿತಾಲಕ್ಷ್ಮೀ ಹೇಳಿದರು.
Advertisement
ಮೂಡುಬಿದಿರೆ ತಾಲೂಕು ಆಡಳಿತ ವತಿಯಿಂದ ಪುರಸಭೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಗುರುವಾರ ತಾಲೂಕು ಕಚೇರಿ ಆವರಣದಲ್ಲಿ “ಮಾಸ್ಕ್ ದಿನ’ದ ಅಂಗವಾಗಿ ಏರ್ಪಡಿಸಲಾದ “ಜಾಗೃತಿ ಜಾಥಾ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಶಿಕಲಾ ಮಾತನಾಡಿ, ಕೋವಿಡ್-19 ಸೋಂಕು ತಡೆಗಟ್ಟಲು ಸರಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಎಲ್ಲರಿಗೂ ಒಳಿತಾಗುವುದು ಎಂದರು.
ಮೆರವಣಿಗೆತಾಲೂಕು ಕಚೇರಿ ಆವರಣದಿಂದ ಹೊರಟ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಬಸ್‌ನಿಲ್ದಾಣ ಮೂಲಕ ಪುರಸಭೆ ಎದುರಿನ ರಸ್ತೆಯಲ್ಲಿ ಮುಂದುವರಿದು ತಹಶೀಲ್ದಾರ್ ಕಚೇರಿ ಎದುರು ಸಂಪನ್ನಗೊಂಡಿತು. ಮಾಜಿ ಸಚಿವ ಅಭಯಚಂದ್ರ, ಜಿ.ಪಂ.ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ತೋಡಾರು ದಿವಾಕರ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಇಂದೂ ಎಂ., ರೋಟರಿ ಕ್ಲಬ್ ಅಧ್ಯಕ್ಷ ಸಿ.ಎಚ್. ಅಬ್ದುಲ್ ಗಫೂರ್, ರೋಟರಿ ಶಾಲೆ ಸಂಚಾಲಕ ಡಾ| ಯತಿಕುಮಾರ್ ಸ್ವಾಮಿ ಗೌಡ, ಜವನೆರ್ ಬೆದ್ರದ ಸ್ಥಾಪಕ ಅಮರ್ ಕೋಟೆ, ಆಶಾ ಕಾರ್ಯಕರ್ತೆಯರು, ಪುರಸಭೆ ಸದಸ್ಯರು, ಗ್ರಾಮ ಲೆಕ್ಕಿಗರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.