Advertisement

ಮಸ್ಕಿ ಚುನಾವಣೆ : 7763 ಮತಗಳಿಂದ ಕಾಂಗ್ರೆಸ್ ಗೆ ಮುನ್ನಡೆ

10:10 AM May 02, 2021 | Team Udayavani |

ರಾಯಚೂರು : ರಾಜ್ಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾದ ರಾಜ್ಯ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮಸ್ಕಿ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಮುನ್ನಡೆ ಕಾಯ್ದುಕೊಂಡಿದೆ.

Advertisement

ಮಸ್ಕಿ ಉಪಚುನಾವಣೆ ಮತ ಎಣಿಕೆ ಭರದಿಂದ ಸಾಗಿದ್ದು ಆರನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ 19403 ಮತಗಳನ್ನು ಪಡೆದರೆ ಬಿಜೆಪಿಯ ಪ್ರತಾಪಗೌಡ ಪಾಟೀಲ್ 11640 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ 7763 ಮತಗಳಿಂದ ಮುನ್ನಡೆ ಸಾಧಿಸುತ್ತಿದೆ. ಆರು ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಲೇ ಸಾಗಿದೆ.  ಆರನೇ ಸುತ್ತಿನಲ್ಲೂ ಕಾಂಗ್ರೆಸ್  3294 ಮತ ಪಡದರೆ ಬಿಜೆಪಿ  1047 ಮತಗಳನ್ನು ಪಡೆದಿದೆ.

ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕ ಚುನಾವಣೆಯ ಫಲಿತಾಂಶ ಇಂದು (ಭಾನುವಾರ ಮೇ 2) ಮಧ್ಯಾಹ್ನದ ಹೊತ್ತಿಗೆ ಹೊರ ಬೀಳುವ ಸಾಧ್ಯತೆ ಇದೆ. ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಯಾರ ಕೊರಳಿಗೆ ವಿಜಯ ಮಾಲೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ಇನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಕೋವಿಡ್ ​ಗೆ ಬಲಿಯಾಗಿದ್ದರಿಂದ ಆ ಕ್ಷೇತ್ರ ಕೂಡ ತೆರವಾಗಿತ್ತು. ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ತೆಕ್ಕೆಗೆ ಸೇರಿಕೊಂಡ ಕಾರಣ ಶಾಸಕ ಸ್ಥಾನಕ್ಕೆ ಅನರ್ಹಗೊಂಡಿದ್ದರು. ಹೀಗಾಗಿ ಆ ಕ್ಷೇತ್ರ ಕೂಡ ತೆರವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next