ಮಸ್ಕಿ (ರಾಯಚೂರು) : ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಕಡೆಯವರು ಹಲ್ಲೆ ನಡೆಸಿದ್ದನ್ನು ಪ್ರತಿಭಟಿಸಿ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆಯಿತು.
ಪಟ್ಟದ ದೈವದ ಕಟ್ಟೆ ಮುಂದೆ ನಿಂತಿದ್ದ ಕಾಂಗ್ರೆಸ್ ಕಾರ್ಯಕರ್ತರಾದ ಸುರೇಶ ಬ್ಯಾಳಿ, ಶರಣಪ್ಪ ಎಲಿಗಾರ, ಕೃಷ್ಣ ಚಿಗರಿ ಸೇರಿದಂತೆ ಮಾಜಿ ಶಾಸಕರ ಪುತ್ರರು ಹಾಗೂ ಅಳಿಯಂದಿರು ಹಲ್ಲೆ ನಡೆಸಿದ್ದು ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು. ಕೆಲ ಕಾಲ ಪೊಲೀಸ್ ಠಾಣೆಯಲ್ಲಿ ಮಾತಿನ ಚಕಮಕಿ ನಡೆಯಿತು.
ಸುದ್ದಿ ತಿಳಿದು ಠಾಣೆಗೆ ಆಗಮಿಸಿದ ಶಾಸಕ ಆರ್. ಬಸನಗೌಡ, ಯೂತ್ ಕಾಂಗ್ರೆಸ್ ನ ರಾಜ್ಯ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ, ಕೆ. ಕರಿಯಪ್ಪ ಸಿಂಧನೂರು, ನಗರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ , ಗ್ರಾಮೀಣ ಬ್ಲಾಕ್ ಅದ್ಯಕ್ಷ ಹನುಮಂತಪ್ಪ ಮುದ್ದಾಪೂರ, ನೇತೃತ್ವದಲ್ಲಿ ಹಲ್ಲೆ ನಡೆಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದರು.
ಇದನ್ನೂ ಓದಿ : ಗೋವಾ : ಅಂಬ್ಯುಲೆನ್ಸ್ ನಲ್ಲಿ ಕೋವಿಡ್ ಸೋಂಕಿತರ ಓಡಾಟ ; ಆತಂಕದಲ್ಲಿ ಚೆಕ್‍ಪೋಸ್ಟ್ ಪ್ರದೇಶ
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಢಾಧಿಕಾರಿ ಶ್ರೀಹರಿಬಾಬು, ಲಿಂಗಸೂಗೂರು ಡಿಎಸ್ ಪಿ ಎಸ್. ಎಸ್. ಹುಲ್ಲೂರ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ದೂರು ಕೋಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಕರಣ ದಾಖಲು ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲರ ಪುತ್ರರಾದ ಪ್ರಸನ್ನ ಪಾಟೀಲ, ಚೇತನ ಪಾಟೀಲ, ರವಿಕುಮಾರ ಪಾಟೀಲ, ವಿಶ್ಬ, ಶ್ರೀಧರ ಕಡಬೂರು ಸೇರಿದಂತ ಹಲವರ ಮೇಲೆ ಮಸ್ಕಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಟ್ಟಣದಲ್ಲಿ ಬೀಗುವಿನ ವಾತಾವರಣ ನಿರ್ಮಾಣವಾಗಿದ್ದು ಮೂರು ಕಾಯ್ದಿಟ್ಟ ಮೀಸಲು ಪಡೆ ತುಕುಡಿ, ಸುತ್ತಮುತ್ತ ಠಾಣೆಗಳಿಂದ ಹೆಚ್ಚವರಿ ಪೊಲೀಸ್ ರನ್ನು ನಿಯೋಜನೆ ಮಾಡಲಾಗಿದೆ.