Advertisement

ಬೈಕ್ ನಿಂದ ಕೆಳಕ್ಕೆ ಬಿದ್ದ ಮಹಿಳೆಗೆ ಆರೈಕೆ ಮಾಡಿದ ಮಸ್ಕಿ ಶಾಸಕ ತುರವಿಹಾಳ

05:30 PM May 09, 2021 | Team Udayavani |

ಮಸ್ಕಿ (ರಾಯಚೂರು): ಬಿಸಿಲಿನ ತಾಪ ತಾಳದೆ ಬೈಕ್ ನಿಂದ ಕೆಳಗೆ ಬಿದ್ದ ಮಹಿಳೆಯನ್ನು ಶಾಸಕ ಆರ್. ಬಸನಗೌಡ ತುರವಿಹಾಳ ಆರೈಕೆ ಮಾಡಿದ ಘಟನೆ ಭಾನುವಾರ ಪಟ್ಟಣದಲ್ಲಿ ನಡೆಯಿತು.

Advertisement

ಇದನ್ನೂ ಓದಿ:ಜಗತ್ ಕಿಲಾಡಿ! ವೈದ್ಯನೆಂದು ಹೇಳಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ ಹಣ್ಣಿನ ವ್ಯಾಪಾರಿ!

ಬೈಕ್ ಸವಾರನ ಹಿಂಬದಿ ಕುಳಿತಿದ್ದ ಮಹಿಳೆ ಬಿಸಿಲಿನ ತಾಪ ತಾಳಲಾರದೆ ಕೆಳಗೆ ಬಿದ್ದರು. ಬೈಕ್ ಹಿಂದಿಯೇ ತನ್ನ ಇನ್ನೊವಾ ಕಾರಿನಲ್ಲಿ ಹೊರಟಿದ್ದ ಶಾಸಕ ಬಸನಗೌಡ ತುರವಿಹಾಳ ಕೂಡಲೇ ತನ್ನ ವಾಹನದಿಂದ ಕೆಳಗೆ ಇಳಿದು ರಸ್ತೆ ಬದಿ ಬಿದ್ದಿದ್ದ ಮಹಿಳೆಗೆ ನೀರು ಕುಡಿಸಿ ಆರೈಕೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.

ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next