Advertisement

ಬೆಂಗಳೂರಿನ ಸಾರಿಗೆ ಸಿಬಂದಿ ಮತ್ತು ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

05:55 PM Dec 23, 2022 | Team Udayavani |

ಬೆಂಗಳೂರು : ಕೋವಿಡ್ ರೂಪಾಂತರಿ ಹರಡದಂತೆ ಒಂದೊಂದೇ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿರುವ ಸರಕಾರ ರಾಜ್ಯ ರಾಜಧಾನಿಯಲ್ಲಿ ಸಾರಿಗೆ ಸಿಬಂದಿ ಮತ್ತು ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಿದೆ. ಕ್ರಿಸ್ಮಸ್ ಮತ್ತು ಹೊಸವರ್ಷಾಚರಣೆ ವೇಳೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

Advertisement

ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಕಡ್ಡಾಯ ಆದೇಶ ಅನ್ವಯವಾಗುತ್ತಿದ್ದು, ಸರಕಾರಿ ಸೇರಿ ಎಲ್ಲಾ ಬಸ್ ಗಳು, ಟ್ಯಾಕ್ಸಿ ಮತ್ತು ಆಟೋ ಚಾಲಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಬಸ್ ನಲ್ಲಿ ಪ್ರಯಾಣಿಸುವವರು ಮಾಸ್ಕ್ ಧರಿಸದೇ ಇದ್ದಲ್ಲಿ ಸಿಬಂದಿಗಳು ತತ್ ಕ್ಷಣ ಮಾಸ್ಕ್ ಧರಿಸಲು ಸೂಚನೆ ನೀಡ್ ಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ. ಶೀತ ಜ್ವರ, ಉಸಿರಾಟದ ತೊಂದರೆ, ತೀವ್ರ ಅನಾರೋಗ್ಯ ಕಾಣಿಸಿಕೊಂಡ ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಮನೆಯಲ್ಲೇ ಪ್ರತ್ಯೇಕವಾಗಿರಬೇಕು ಎಂದು ಸೂಚಿಸಲಾಗಿದೆ. ಬೂಸ್ಟರ್ ಡೋಸ್ ಪಡೆಯದೇ ಇದ್ದವರು ಕಡ್ಡಾಯವಾಗಿ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next