Advertisement
ಇತ್ತೀಚೆಗೆ, ಪಾಕಿಸ್ಥಾನದ ವಿದೇಶಾಂಗ ಸಚಿವ ಖುರೇಶಿ ಅವರು, ಮಸೂದ್ ಪಾಕಿಸ್ಥಾನದಲ್ಲೇ ಇದ್ದಾನೆ ಹಾಗೂ ಆತನ ಆರೋಗ್ಯ ಸ್ಥಿತಿ ಸರಿಯಿಲ್ಲ ಎಂದು ಹೇಳಿದ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸೇನಾಧಿಕಾರಿ ಯೊಬ್ಬರು, “ಮಸೂದ್‌ನ ವೈದ್ಯಕೀಯ ದಾಖಲೆಗಳ ಪ್ರಕಾರ, ಆತ ಕಿಡ್ನಿ ವೈಫಲ್ಯಕ್ಕೆ ತುತ್ತಾಗಿರುವುದು ಕಂಡುಬಂದಿದೆ. ನಿಯಮಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿದೆ’ ಎಂದಿದ್ದಾರೆ. ಗುರುವಾರ, ಮಸೂದ್ ಪಾಕಿಸ್ಥಾನದಲ್ಲೇ ಇರುವುದರ ಬಗ್ಗೆ ಮಾಧ್ಯಮಗಳ ಮುಂದೆ ಬಾಯಿಬಿಟ್ಟಿದ್ದ ಖುರೇಷಿ, “ಮಸೂದ್ ಅನಾರೋಗ್ಯಕ್ಕೆ ತುತ್ತಾಗಿ ರುವ ಕಾರಣ, ಮನೆಯಿಂದ ಕದಲಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ’ ಎಂದಿದ್ದರು. Advertisement
ಮಸೂದ್‌ಗೆ ಕಿಡ್ನಿ ವೈಫಲ್ಯ; ಸೇನಾ ಆಸ್ಪತ್ರೆಯಲ್ಲೇ ಚಿಕಿತ್ಸೆ
12:30 AM Mar 03, 2019 | |
Advertisement
Udayavani is now on Telegram. Click here to join our channel and stay updated with the latest news.