Advertisement

ಧರ್ಮಸ್ಥಳ: ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ : 201 ಜೋಡಿ ಗೃಹಸ್ಥಾಶ್ರಮಕ್ಕೆ

12:18 AM May 02, 2023 | Team Udayavani |

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮೇ 3ರಂದು ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ. ಈಗಾಗಲೇ ನೋಂದಣಿ ಮಾಡಿಕೊಂ ಡಿರುವ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿವೆ.

Advertisement

ಮೇ 2ರಂದು ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ವಧುವಿಗೆ ಸೀರೆ, ರವಿಕೆ ಕಣ ಮತ್ತು ವರನಿಗೆ ಧೋತಿ, ಶಾಲು ನೀಡಲಾಗುತ್ತದೆ. ಮೇ 3ರಂದು ಸಂಜೆ 5ರಿಂದ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವಿವಾಹ ನೆರವೇರಲಿರುವ ಅಮೃತವರ್ಷಿಣಿ ಸಭಾ ಮಂಟಪಕ್ಕೆ ಭವ್ಯ ಮೆರವಣಿಗೆಯಲ್ಲಿ ಸಾಗುವರು.

ದರ್ಶನ್‌ ಭಾಗಿ
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಕನ್ನಡ ಚಲನಚಿತ್ರ ನಟ ದರ್ಶನ್‌ ತೂಗುದೀಪ ಅವರು ವಧೂ-ವರರಿಗೆ ಮಂಗಲಸೂತ್ರ ವಿತರಿಸುವರು. ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದಂತೆ ಸಂಭ್ರಮದಿಂದ ನೆರವೇರಲಿದೆ. ಬಳಿಕ ಅನ್ನಪೂರ್ಣ ಭೋಜನಾಲಯದಲ್ಲಿ ವಿವಾಹ ಭೋಜನ ಇರಲಿದೆ.

ಈವರೆಗೆ 12,576 ಜೋಡಿ ವಿವಾಹ
ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಪ್ರಾರಂಭಿಸಿದೆವು. ಬಳಿಕ ಪ್ರತೀ ವರ್ಷ ನಡೆಯುತ್ತಿದೆ. ಕಳೆದ ವರ್ಷದವರೆಗೆ 12,576 ಜೋಡಿಗಳಿಗೆ ವಿವಾಹವಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next