Advertisement
ವಿವಾಹವಾಗಲು ಬಯಸುವವರು ದೇವಸ್ಥಾನದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.
ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರದ ಪ್ರತಿ, ಪಾಸ್‌ಪೋರ್ಟ್ ಗಾತ್ರದ 2 ಭಾವಚಿತ್ರಗಳು, ಆಧಾರ್ ಕಾರ್ಡ್, ಪಡಿತರ ಚೀಟಿ, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್‌ನಿಂದ ಅಥವಾ ಸಂಬಂಧಪಟ್ಟ ಸರಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
Related Articles
ವರನಿಗೆ ಪ್ರೋತ್ಸಾಹ ಧನವಾಗಿ ದೇವಸ್ಥಾನದಿಂದ 5 ಸಾವಿರ ರೂ. ಹಾಗೂ ವಧುವಿಗೆ 10 ಸಾವಿರ ರೂ. ನೀಡಲಾಗುವುದು. 40 ರೂ. ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡುಗಳನ್ನೂ ನೀಡಲಾಗುವುದು. ವಿವಾಹಕ್ಕೆ ಆಗಮಿಸುವವರಿಗೆ ಊಟೋಪಚಾರ ಇರುತ್ತದೆ. ವಧುವಿಗೆ ಕಂದಾಯ ಇಲಾಖೆಯಿಂದ ಆದರ್ಶ ವಿವಾಹ ಯೋಜನೆಯಡಿ 10 ಸಾವಿರ ರೂ. ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಟ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ 50 ಸಾವಿರ ರೂ. ಒದಗಿಸಲಾಗುವುದು.
Advertisement
ಹೆಚ್ಚಿನ ಮಾಹಿತಿಗೆ 08257-281224 ಸಂಪರ್ಕಿಸಬಹುದು ಅಥವಾ ಕುಕ್ಕೆ ದೇಗುಲದ ಕಚೇರಿಯಿಂದ ಖುದ್ದಾಗಿ ಪಡೆದುಕೊಳ್ಳಬಹುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.