Advertisement

ಮಡಿಕೇರಿಯಲ್ಲಿ ಹಿಂದೂ ಸಂಘಟನೆಗಳ ಬೃಹತ್‌ ಪ್ರತಿಭಟನೆ

12:44 AM Oct 17, 2019 | Team Udayavani |

ಮಡಿಕೇರಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ಖಂಡಿಸಿ ಜಿಲ್ಲಾ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.

Advertisement

ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕೊಲೆಗಟುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ವಿಶ್ವ ಹಿಂದು ಪರಿಷತ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ನರಸಿಂಹ ಅ.10ರಂದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಬಿಂದು ಪ್ರಕಾಶ್‌ ಪಾಲ್‌ ಕುಟುಂಬವನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಇದು ಹಿಂದೂ ಸಮುದಾಯದ ಮೇಲೆ ನಡೆದಿರುವ ಘೋರ ದಾಳಿಯಾಗಿದ್ದು, ಅಲ್ಲಿನ ಸರಕಾರವೇ ಇದಕ್ಕೆ ನೇರ ಹೊಣೆ ಎಂದು ಆರೋಪಿಸಿದರು. ರಾಜಕೀಯ ಲಾಭಕ್ಕಾಗಿ ಕೆಲವು ಪಕ್ಷಗಳು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದ್ದು, ಇದರಿಂದ ದೇಶದ ಭದ್ರತೆಗೆ ದಕ್ಕೆಯಾಗುತ್ತಿದೆ. ಅಲ್ಲದೆ ಹಿಂದೂ ಸಮುದಾಯದ ಮೇಲೆ ನಿರಂತರ ದಾಳಿಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನರಲ್‌ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.

ಪಶ್ಚಿಮ ಬಂಗಾಳ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು, ಹಿಂದೂಗಳ ಹತ್ಯೆ ಪ್ರಕರಣವನ್ನು ಸಿ.ಬಿ.ಐ.ಗೆ ವಹಿಸಬೇಕು, ಹಂತಕರಿಗೆ ಮರಣದಂಡನೆ ವಿಧಿಸಬೇಕು, ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಬೇಕು, ರಾಷ್ಟ್ರ ವಿರೋಧಿ ಹಾಗೂ ಸಮಾಜ ಘಾತುಕ ಶಕ್ತಿಗಳನ್ನು ಮಟ್ಟ ಹಾಕಬೇಕು, ದೇಶದ್ರೋಹದ ವಿರುದ್ಧ ಎನ್‌ಐಎ ನಿಗಾವಹಿಸಬೇಕು ಎಂದು ಒತ್ತಾಯಿಸಿದರು. ಬಜರಂಗದಳದ ಜಿಲ್ಲಾ ಸಂಚಾಲಕ ಕೆ.ಎಚ್‌.ಚೇತನ್‌, ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ, ವಿನಯ್‌ ಕುಮಾರ್‌, ಬಿಜೆಪಿ ನಗರಾಧ್ಯಕ್ಷ‌ ಮಹೇಶ್‌ಜೈನಿ, ಪ್ರಮುಖರಾದ ಟಿ.ಎಸ್‌.ಪ್ರಕಾಶ್‌, ಉಣ್ಣಿಕೃಷ್ಣ, ಮನುಕುಮಾರ್‌, ಚರಣ್‌, ರಮೇಶ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next