ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಆರೆಂಜ್ ಕೌಂಟಿಯ ಬೈಕರ್ಸ್ ಬಾರ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಸಿಬಿಎಸ್ ಲಾಸ್ ಏಂಜಲೀಸ್ ಮೂಲಗಳನ್ನು ಉಲ್ಲೇಖಿಸಿ ಬುಧವಾರ ವರದಿ ಮಾಡಿದೆ.
ನಿವೃತ್ತ ಕಾನೂನು ಜಾರಿ ಅಧಿಕಾರಿಯೊಬ್ಬರು ಬಾರ್‌ನಲ್ಲಿ ಮನಬಂದಂತೆ ಗುಂಡು ಹಾರಿಸಿದ್ದು ಇದರಿಂದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟರೆ ಆರು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಮಾಡಿದೆ.
ಈ ವೇಳೆ ಭದ್ರತಾ ಸಿಬ್ಬಂದಿಗಳು ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಮೇಲೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದು ಆತನ ಸ್ಥಿತಿ ಹೇಗಿದೆ ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿಕೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ ಎಂದಿದ್ದಾರೆ.
ಕ್ಯಾಲಿಫೋರ್ನಿಯಾ ಗವರ್ನರ್ ಕಚೇರಿಯು ಆರೆಂಜ್ ಕೌಂಟಿಯಲ್ಲಿ ನಡೆದ ದಾಳಿಯ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ.
ಇದನ್ನೂ ಓದಿ: Landslide: ಭಾರಿ ಮಳೆಗೆ ನಲುಗಿದ ಹಿಮಾಚಲ: ಕುಸಿದು ಬಿದ್ದ ಕಟ್ಟಡ, ಹಲವರು ಸಿಲುಕಿರುವ ಶಂಕೆ