Advertisement

ಮಹಾ ಹಿಂಸಾಚಾರ: 360ಕ್ಕೂ ಅಧಿಕ ಮಂದಿ ವಿರುದ್ಧ ಕೇಸು

10:43 PM Sep 02, 2023 | Team Udayavani |

ಮುಂಬೈ: ಮಹಾರಾಷ್ಟ್ರದ ಜಲ್ನಾದಲ್ಲಿ ಮರಾಠ ಕೋಟಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಈ ಪ್ರಕರಣ ಸಂಬಂಧಿಸಿದಂತೆ 360ಕ್ಕೂ ಅಧಿಕ ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ, ಗಲಭೆಯನ್ನು ಶಮನಗೊಳಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂಬುದಾಗಿಯೂ ತಿಳಿಸಿದ್ದಾರೆ. ಸೊಲ್ಲಾಪುರ ಮಾರ್ಗದಲ್ಲಿ ಮನೋಜ್‌ ಜಾರಂಗೆ ಅವರ ನೇತೃತ್ವದಲ್ಲಿ ಮರಾಠ ಕೋಟಾಗೆ ಆಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಸಲಾಗುತ್ತಿತ್ತು.

Advertisement

ಪೊಲೀಸರಿಗೂ- ಪ್ರತಿಭಟನಾಕಾರರಿಗೂ ಮಾತಿನ ಚಕಮಕಿ ನಡೆದು, ಕಲ್ಲಿನ ತೂರಾಟ ನಡೆದಿದೆ. ನಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪೊಲೀಸರು ಸೇರಿದಂತೆ 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಹಲವಾರು ವಾಹನಗಳಿಗೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಬಳಿಕ ಪೊಲೀಸರು ಲಾಠಿ ಚಾರ್ಜ್‌ ನಡೆಸಿ, ಪ್ರತಿಭಟನಾ ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ಹಿಂಸಾಚಾರದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ 16 ಮಂದಿ ಪರಿಚಿತರು ಸೇರಿದಂತೆ 360ಕ್ಕೂ ಅಧಿಕ ಮಂದಿ ವಿರುದ್ಧ ಕೇಸು ದಾಖಲಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next