Advertisement

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ

07:17 PM Jul 02, 2024 | Team Udayavani |

ಮುಂಬಯಿ: ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ 12 ರಂದು ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement

ಮುಂಬೈನಿಂದ 100 ಕಿಮೀ ದೂರದಲ್ಲಿರುವ ಪಾಲ್ಘರ್ ಪ್ರದೇಶದಲ್ಲಿನ ಐವತ್ತಕ್ಕೂ ಹೆಚ್ಚು ಜೋಡಿಗಳಿಗೆ, ಅದರಲ್ಲೂ ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು. ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ನಲ್ಲಿ ನಡೆದ ವಿವಾಹ ಸಮಾರಂಭವದಲ್ಲಿ ಈ ನೂತನ ದಂಪತಿಗಳ ಕುಟುಂಬದ ಪರವಾಗಿ ಸುಮಾರು 800 ಜನರು ಭಾಗವಹಿಸಿದ್ದರು. ಅನಂತ್- ರಾಧಿಕಾ ಮದುವೆಗೆ ಇದು ಆರಂಭಿಕ ಕಾರ್ಯಕ್ರಮವಾಗಿದ್ದು, ಮುಂದಿನ ಮದುವೆ ಋತುವಿನಲ್ಲಿ ದೇಶದಾದ್ಯಂತ ಈ ರೀತಿಯಾಗಿ ನೂರಕ್ಕೂ ಹೆಚ್ಚು ವಿವಾಹಗಳಿಗೆ ಅಂಬಾನಿ ಕುಟುಂಬದ ಬೆಂಬಲ ದೊರೆಯಲಿದೆ.

ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಮತ್ತು ಮುಕೇಶ್ ಅಂಬಾನಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡು ನವ ವಿವಾಹಿತ ಜೋಡಿಗಳಿಗೆ ಶುಭಾಶಯಗಳನ್ನು ಸಲ್ಲಿಸಿದರು.

ಸಾಮೂಹಿಕ ವಿವಾಹ ಸಂದರ್ಭದಲ್ಲಿ ಪ್ರತಿ ಜೋಡಿಗೂ ಮಂಗಳಸೂತ್ರ, ಮದುವೆಯ ಉಂಗುರಗಳು, ಮೂಗುತಿ ಸೇರಿದಂತೆ ಚಿನ್ನಾಭರಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲ್ಗೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು. ಇದರ ಜತೆಗೆ ಪ್ರತಿ ವಧುವಿಗೆ ರೂ. 1.01 ಲಕ್ಷ (ಒಂದು ಲಕ್ಷದ ಒಂದು ಸಾವಿರ) ರೂಪಾಯಿಯನ್ನು ತವರು ಮನೆಯಿಂದ ನೀಡುವಂಥ ಸ್ತ್ರೀಧನದ ರೂಪದಲ್ಲಿ ಕೊಡಲಾಯಿತು. ಅಲ್ಲದೆ ಪ್ರತಿ ದಂಪತಿಗೂ ಒಂದು ವರ್ಷಕ್ಕೆ ಸಾಕಾಗುವಂಥ ದಿನಸಿ, ಗೃಹೋಪಯೋಗಿ ವಸ್ತುಗಳನ್ನು ಕೊಡಲಾಯಿತು. ಈ ಗೃಹೋಪಯೋಗಿ ವಸ್ತುಗಳಲ್ಲಿ 36 ಅಗತ್ಯ ವಸ್ತುಗಳು ಮತ್ತು ಪಾತ್ರೆಗಳು, ಗ್ಯಾಸ್ ಸ್ಟೌ, ಮಿಕ್ಸರ್ ಮತ್ತು ಫ್ಯಾನ್, ಹಾಗೆಯೇ ಹಾಸಿಗೆ ಮತ್ತು ದಿಂಬುಗಳು ಇದ್ದವು.

Advertisement

ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಆಹ್ವಾನಿತರು ವೀಕ್ಷಿಸಿದರು. ಈ ಹಿಂದೆ ಕೂಡ ಕುಟುಂಬದಲ್ಲಿ ಮದುವೆ ನಡೆದ ಸಂದರ್ಭದಲ್ಲಿ ವಿವಿಧ ಸಮುದಾಯಗಳ ಜನರಿಗೆ ಮತ್ತು ಎನ್‌ಜಿಒಗಳ ಸಹಕಾರದೊಂದಿಗೆ ಅನ್ನ ದಾನ ಸೇವೆ ಮಾಡುತ್ತಾ ಬರುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next