ದಾವಣಗೆರೆ: ಶ್ರೀ ಗುರು ರಾಮದಾಸ ಸ್ವಾಮಿ ಆಧ್ಯಾತ್ಮ ಮಂದಿರ ಟ್ರಸ್ಟ್ ವತಿಯಿಂದ 31ನೇ ವರ್ಷದ ಸಾಮೂಹಿಕ ಕಲ್ಯಾಣ ಮಹೋತ್ಸವ, 31ನೇ ವರ್ಷದ ಶ್ರೀ ಗುರು ಮಾದಾರ ಚನ್ನಯ್ಯಸ್ವಾಮಿ ಜಯಂತ್ಯುತ್ಸವ, ಗುರುರಾಮದಾಸ ಸ್ವಾಮೀಜಿಯವರ 65ನೇ, ಮಲ್ಲಯ್ಯ ಸ್ವಾಮಿಗಳ 20ನೇ ಹಾಗೂ ಕೊಡಯ್ಯ ಸ್ವಾಮಿಗಳ 16ನೇ ವರ್ಷದ ಪುಣ್ಯಾರಾಧನೆ ಸಮಾರಂಭ ಡಿ. 28 ರಂದು ಮಧ್ಯಾಹ್ನ 12 ಗಂಟೆಗೆ ಇಲ್ಲಿಯ ಗಾಂಧಿನಗರ ಒಂದನೇ ಕ್ರಾಸ್‌ನಲ್ಲಿರುವ ಶ್ರೀ ಗುರು ರಾಮದಾಸಸ್ವಾಮಿ ಆಧ್ಯಾತ್ಮಮಂದಿರದಲ್ಲಿ ನಡೆಯಕಿದೆ ಎಂದು ಟ್ರಸ್ಟ್ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಹೆಬ್ಟಾಳು ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಹಾವೇರಿ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು.
ಶಾಸಕ ಡಾ| ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮಾದಾರ ಚನ್ನಯ್ಯ ಸ್ವಾಮೀಜಿ ಜಯಂತಿ ಉದ್ಘಾಟಿಸುವರು. ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ವಧು-ವರರರಿಗೆ ಮಾಂಗಲ್ಯ ವಿತರಿಸುವರು. ಡಾ| ಜಗಜೀವನ್‌ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಪ್ರೊ| ಲಿಂಗಣ್ಣ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದರು.
ಮಹಾನಗರ ಪಾಲಿಕೆ ಮಹಾಪೌರ ಬಿ.ಜಿ. ಅಜಯಕುಮಾರ್, ಕೈಗಾರಿಕೋದ್ಯಮಿ ಅಥಣಿ ವೀರಣ್ಣ,ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಶಾಸಕ ಮೋತಿ ವೀರಣ್ಣ, ಉದ್ಯಮಿ ಬಿ.ಸಿ. ಉಮಾಪತಿ, ವಿಪ ಸದಸ್ಯ ಅಬ್ದುಲ್ ಜಬ್ಟಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ದಾವಣಗೆರೆ ವಿವಿ ಕುಲಪತಿ ಪ್ರೊ| ಶರಣಪ್ಪ ಹಲಸೆ ಇನ್ನಿತರ ಗಣ್ಯರು ಸಾಮೂಹಿಕ ವಿವಾಹದ ವಿವಿಧ ಪ್ರಕ್ರಿಯೆಗಳಿಗೆ ಚಾಲನೆ ನೀಡುವರು. ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.
ಸಂಘಟನೆ ಪ್ರಮುಖರಾದ ಬಿ.ಎಂ. ರಾಮಸ್ವಾಮಿ, ಬಿ.ಎಂ. ಈಶ್ವರಪ್ಪ, ಎನ್. ನೀಲಗಿರಿಯಪ್ಪ, ಚೌಡ್ಡಿ ನೀಲಕಂಠಪ್ಪ, ಎಲ್.ಹೆಚ್. ಸಾಗರ್ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.