Advertisement

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

07:09 PM Nov 23, 2024 | Team Udayavani |

ಕಾಪು: ಸಂವಿಧಾನವನ್ನು ದೇಶಕ್ಕೆ ಅರ್ಪಣೆ ಮಾಡಿದ ನೆನಪಿನಲ್ಲಿ ರಕ್ಷಣಾಪುರ ಜವನೆರ್ ಸಂಘಟನೆಯ ನೇತೃತ್ವದಲ್ಲಿ ನ. 26 ರಂದು ಕಾಪು ಪೇಟೆಯಲ್ಲಿ ಸಂವಿಧಾನ ಆಚರಣೆ, ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ನಡೆಯಲಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.

Advertisement

ಶನಿವಾರ ಕಾಪು ಪ್ರೆಸ್ ಕ್ಲಬ್‌ನಲ್ಲಿ ಸುದ್ಧಿಗೋಷ್ಠಿ ನಡೆಸಿ, ಸಂವಿಧಾನ ಜಾಗೃತಿ ಜಾಥಾ ಮಾಹಿತಿ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಂವಿಧಾನ ಉಳಿಸಿ ಕಾರ್ಯಕ್ರಮದ ಪ್ರಯುಕ್ತ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದೆ. ವಿವಿಧ ದೇವಸ್ಥಾನ, ಚರ್ಚ್, ಮಸೀದಿಗಳಿಗೆ ತೆರಳಿದ್ದು ಕರ ಪತ್ರ ಹಂಚಲಾಗುತ್ತಿದ್ದು, ಸಂಘ ಸಂಸ್ಥೆಗಳ ಪ್ರತಿನಿಽಗಳನ್ನೂ ಆಮಂತ್ರಿಸಲಾಗಿದೆ. ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು ಐದು ಸಾವಿರಕ್ಕೂ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಸಂವಿಧಾನವನ್ನು ದೇಶಕ್ಕೆ ಅರ್ಪಣೆ ಮಾಡಿದ ನೆನಪಿನಲ್ಲಿ ಮೂರು ಸಾವಿರ ಮಹಿಳೆಯರಿಗೆ ಸೀರೆ ವಿತರಿಸಲಾಗುವುದು ಎಂದರು.

ಜಾಥಾ, ಸಮಾವೇಶದ ಉದ್ದೇಶವೇನು ? : ದೇಶದ ಭದ್ರತೆ, ನಾಗರಿಕ ಹಕ್ಕುಗಳ ರಕ್ಷಣೆ ಮತ್ತು ಕರ್ತವ್ಯಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಸಂವಿಧಾನ ಪೂರಕವಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಸಂವಿಧಾನಕ್ಕೆ ಅಪಾಯ ಎದುರಾಗುತ್ತಿದೆ. ಅಪಪ್ರಚಾರ ನಡೆಯುತ್ತಿದೆ. ಈ ಕುರಿತಾಗಿ ಜನರಿಗೆ ಅದರ ಉದ್ದೇಶ, ಹಕ್ಕುಗಳ ಬಗ್ಗೆ ತಿಳುವಳಿಕೆ ಮೂಡಿಸುವುದು, ಆರ್ಥಿಕ ಸ್ವಾತಂತ್ರ್ಯಮತ್ತು ಸಾಮಾಜಿಕ ಸ್ವಾತಂತ್ರ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಜಾಗೃತಿ ಜಾಥ ನಡೆಯಲಿದೆ ಎಂದರು.

Advertisement

ಧರ್ಮಗುರುಗಳಿಂದ ಚಾಲನೆ : ಸಂಜೆ 3 ಗಂಟೆಗೆ ಜಾಗೃತಿ ಸಂದೇಶ ಜಾಥಾ ನಡೆದು, 4 ಗಂಟೆಗೆ ಕಾಪು ಪೇಟೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಮೂರು ಧರ್ಮಗಳ ಧರ್ಮ ಗುರುಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ವಾಗ್ಮಿಗಳಾದ ನಿಕೇತ್ ರಾಜ್, ಸುಧೀರ್ ಕುಮಾರ್ ಮುರೋಳಿ, ಜಯಪ್ರಕಾಶ್ ಹೆಗ್ಡೆ, ದಲಿತ ಸಂಘರ್ಷ ಸಮಿತಿಯ ಸುಂದರ ಮಾಸ್ಟರ್, ಆನಂದ್ ಬ್ರಹ್ಮಾವರ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಪುದ್ದೀನ್ ಶೇಖ್, ಮಹಿಳಾ ಕಾಂಗ್ರೆಸ್ ಕಾಪು ಬ್ಲಾಕ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ರಕ್ಷಣಾಪುರ ಜವನೆರ್ ಸಂಘಟನೆಯ ಅಧ್ಯಕ್ಷ ನವೀನ್ ಶೆಟ್ಟಿ ಪಡುಬಿದ್ರಿ, ದಲಿತ ಸಂಘ ಸಮಿತಿ ಮುಖಂಡ ಶೇಖರ್ ಹೆಜ್ಮಾಡಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next