ವಿವಿಧೋದ್ದೇಶ ಸಂಘ ಇದರ ವತಿಯಿಂದ ಹಲವು ಜನರಿಗೆ ಪ್ರಯೋಜನವಾಗುವ ಕಾರ್ಯಕ್ರಮ ನಡೆಯುತ್ತಿದ್ದು, ಇಂದು
ರೋಗಿಗಳ, ಅಪಘಾತಕ್ಕೊಳಗಾದವರ ಜೀವ ಉಳಿಸುವ, ರಕ್ತ ಸಂಗ್ರಹಿಸುವ ಶಿಬಿರವನ್ನು ಹಮ್ಮಿಕೊಂಡಿರುವುದು ಅಭಿನಂದನೀಯ ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು.
Advertisement
ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರಸಂಘ ಬೆಳ್ತಂಗಡಿ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಂಘ, ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ವತಿಯಿಂದ ನಡೆದ ಬೃಹತ್ ರಕ್ತದಾನ, ಅಕ್ಯೂಪ್ರಶರ್ ಮತ್ತು ಸುಜೋಕ್ ಥೆರಪಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ದೇವಿಪ್ರಸಾದ್, ಬೆಳ್ತಂಗಡಿ ತಾ| ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಹಾಗೂ ವೈದ್ಯಾಧಿಕಾರಿಗಳನ್ನು ಸಮ್ಮಾನಿಸಲಾಯಿತು. ತಾ.ಪಂ. ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಬಸವರಾಜ್ ಕೆ. ಅಯ್ಯಣ್ಣನವರ್, ವೆನ್ಲಾಕ್ ಜಿಲ್ಲಾಸ್ಪತ್ರೆಯ ರಕ್ತನಿಧಿ ವಿಭಾಗದ ಡಾ| ಶರತ್, ಅಕ್ಯೂಪ್ರಶರ್ ಮತ್ತು ಸುಜೋಕ್ ಥೆರಪಿ ಚಿಕಿತ್ಸಾ ವಿಭಾಗದ ಡಾ| ಭವಾನಿ, ರಾಜ್ಯ ಸರಕಾರಿ
ನೌಕರರ ಸಂಘದ ಗೌರವಾಧ್ಯಕ್ಷ ಸಿ.ಆರ್. ನರೇಂದ್ರ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ನಿರೂಪಿಸಿ, ವಂದಿಸಿದರು.