Advertisement

ಸಿದ್ದು ಹುಟ್ಟುಹಬ್ಬಕ್ಕೆ ಭರದ ಸಿದ್ಧತೆ: ದಾವಣಗೆರೆಯಲ್ಲಿ ನಾಳೆ ಆಯೋಜನೆ, ರಾಹುಲ್‌ ಆಗಮನ

12:19 AM Aug 02, 2022 | Team Udayavani |

ಬೆಂಗಳೂರು: ದಾವಣಗೆರೆಯಲ್ಲಿ ಗುರು ವಾರ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ.

Advertisement

ರಾಹುಲ್‌ ಗಾಂಧಿ, ಮಲ್ಲಿ ಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ನ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, 6 ರಿಂದ 8 ಲಕ್ಷ ಜನ ಸೇರುವ ನಿರೀಕ್ಷೆಯಿದೆ.

ಸಮಾವೇಶಕ್ಕೆ ಬರುವವರಿಗಾಗಿ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ 224 ವಿಧಾನಸಭೆ ಕ್ಷೇತ್ರ ಗಳಿಂದ ಶಾಸಕರು, ಮಾಜಿ ಶಾಸಕರು, ಪಕ್ಷದ ಘಟಕಗಳ ಅಧ್ಯಕ್ಷರು ಕಾರ್ಯಕರ್ತರು ಮತ್ತು ಮುಖಂಡರ ಜತೆಗೂಡಿ ಸಮಾವೇಶಕ್ಕೆ ಆಗಮಿಸಲಿದ್ದಾರೆ.

ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೋಮವಾರ ಹುಬ್ಬಳ್ಳಿಗೆ ಪ್ರಯಾಣಿಸಿ ದ್ದಾರೆ. ಮಾಜಿ ಸಚಿವ ಜಮೀರ್‌ ಅಹಮದ್‌ ಸೇರಿ ಹಲವರು ಜತೆಗಿದ್ದರು. ರಾಹುಲ್‌ ಗಾಂಧಿಯವರು ಮಂಗಳವಾರ ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ಪರಂಗೆ ಪ್ರಣಾಳಿಕೆ ನೇತೃತ್ವ
ಮುಂದಿನ ವಿಧಾನಸಭೆ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಅವರನ್ನು ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಆದೇಶ ಹೊರಡಿಸಿದ್ದಾರೆ. ಪ್ರಣಾಳಿಕೆ ಸಮಿತಿಗೆ ಡಾ| ಜಿ. ಪರಮೇಶ್ವರ್‌ ಜತೆಗೆ ಮಾಜಿ ಶಾಸಕ ಮಧು ಬಂಗಾರಪ್ಪ ಹಾಗೂ ಪ್ರೊ| ಕೆ.ಇ. ರಾಧಾಕೃಷ್ಣ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next