ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಬೋವಿ ಸಮುದಾಯದ ಬೃಹತ್ ಸಮಾವೇಶ ಹಾಗೂ ಶಿವ ಯೋಗಿ ಸಿದ್ದರಾಮೇಶ್ವರ ಜಯಂತಿ ಕಾಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಈ ವಿಷಯ ತಿಳಿಸಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭೋವಿ ಸಮಾಜದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆಂದರು.
ಅನಿವಾರ್ಯ ಕಾರಣಗಳಿಂದ ಸಚಿವ ಸ್ಥಾನ ಭೋವಿ ಸಮಾಜಕ್ಕೆ ಸಿಗಲಿಲ್ಲ. ಬಿಜೆಪಿ ಸ್ವಂತ ಬಲದಿಂದ ಅಧಿಕಾರ ನಡೆಸಿದ್ದರೆ ಭೋವಿ ಸಮಾಜದ ಶಾಸಕರಿಗೆ ಮಂತ್ರಿ ಸಿಗುತ್ತಿತ್ತು. ಮುಂದೆ ಯಡಿಯೂಪ್ಪ ಸಮಾಜದ ಶಾಸಕರನ್ನು ಕೈ ಹಿಡಿಯುವ ಭರವಸೆ ಇದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವೆಂಕಟಸ್ವಾಮಿ, ಜಿಪಂ ಮಾಜಿ ಅಧ್ಯಕ್ಷೆ ಮಂಗಮ್ಮ ಮುನಿಸ್ಚಾಮಿ, ಎಂ.ವಿ.ಕೃಷ್ಣಪ್ಪ, ಜಿಪಂ ಅಧ್ಯಕ್ಷ ಮುನಿಯಪ್ಪ, ಗವಿಗಾನಹಳ್ಳಿ ನಾರಾಯಣಸ್ವಾಮಿ, ವಿಜಯಕುಮಾರ್, ಅನಿಲ್ ಕುಮಾರ್, ಮಾಕಳಿ ರವಿ, ಚಿತ್ರನಟ ಶಂಕರ್ ಮತ್ತಿತರರು ಇದ್ದರು.