ದಾವಣಗೆರೆ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಉದ್ದೇಶದಿಂದ ಕುರುಬರ ಎಸ್‌ಟಿ ಹೋರಾಟ ಸಮಿತಿಯಿಂದ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಸಮಾವೇಶ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಶನಿವಾರ ಹರಿಹರ ತಾಲೂಕಿನ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಾಗಲಕೋಟೆ, ದಾವಣಗೆರೆ, ಮೈಸೂರು, ಕಲಬುರಗಿಯಲ್ಲಿ ನಡೆಯುವ ಹೋರಾಟ ಸಮಿತಿ ಸಮಾವೇಶದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಕೈಗೊಳ್ಳಬಹುದಾದ ಹೋರಾಟದ ರೂಪುರೇಶೆಗಳ ಬಗ್ಗೆ ಚರ್ಚಿಸಲಾಗುವುದು ಎಂದರು.
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹಿಸಿ ಜನವರಿ 15ರಿಂದ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳ ನೇತೃತ್ವದಲ್ಲಿ ಕಾಗಿನೆಲೆಯಿಂದ, ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲಾಗುವುದು. ಪಾದಯಾತ್ರೆ ಫೆಬ್ರವರಿ 7 ರಂದು ಪೂರ್ಣಗೊಳ್ಳಲಿದ್ದು ಅಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸಮಾವೇಶದಲ್ಲಿ 10ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಇದನ್ನೂ ಓದಿ: ಅ.29ರಿಂದ ಫ್ಲಿಫ್ ಕಾರ್ಟ್ Big Diwali Sale ಆರಂಭ: ಮೊಬೈಲ್, TV ಗಳಿಗೆ ಭರ್ಜರಿ ಡಿಸ್ಕೌಂಟ್
ಎಸ್‌ಟಿ ಗೆ ಸೇರಿಸಬೇಕೆಂದು ನಿರಂತರವಾಗಿ ಕುರುಬ ಸಮುದಾಯ ಹೋರಾಟ ಮಾಡಿಕೊಂಡು ಬಂದಿದೆ. ಎಸ್‌ಟಿಗೆ ಸೇರಿಸಲು ಯಾವ ಸಮುದಾಯ ಅರ್ಹವಿದೆ ಎಂದು ಕುಲಶಾಸ್ತ್ರೀಯ ಅಧ್ಯಯನ ಸಮಿತಿ ಹೇಳುತ್ತೋ, ಅವೆಲ್ಲ ಸಮುದಾಯಗಳು ಎಸ್‌ಟಿಗೆ ಸೇರಬೇಕು ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.
ಮಹಿಳಾ ಸಮಾವೇಶ.
ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, ನವೆಂಬರ್ 8ರಂದು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಮಠದಲ್ಲಿ, ಬೃಹತ್ ಮಹಿಳಾ ಸಮಾವೇಶ ನಡೆಸಲಾಗುವುದು. ಇಂದು ಮಠದಲ್ಲಿ ನಡೆದ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಮಹಿಳಾ ಮುಖಂಡರು ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಿದ್ದು, ಮಹಿಳಾ ಸಮಾವೇಶ ಯಶಸ್ವಿಯಾಗಲಿದೆ ಎಂದರು.
ಇದನ್ನೂ ಓದಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ: ಹಣಕಾಸು ಸಚಿವಾಲಯ