ಕಾಬೂಲ್ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಮದರಸಾವೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದಾಗಿ 20 ಮಂದಿ ಮೃತಪಟ್ಟಿದ್ದು, 40ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಈ ಘಟನೆ ವಾಯುವ್ಯ ಕಾಬೂಲ್ನ ಕೊತಾಲ್-ಇ- ಖೈರ್ ಖಾನಾದಲ್ಲಿ ಬುಧವಾರ ನಡೆದಿದೆ.
ಸಾಕಷ್ಟು ಸಾವು-ನೋವುಗಳು ಸಂಭವಿಸಿವೆ ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖೈರ್ ಖಾನಾ ಪ್ರದೇಶದ ಮದರಸಾದಲ್ಲಿ ಸಂಜೆ ಪ್ರಾರ್ಥನೆ ನಡೆಯಿತ್ತಿದ್ದ ವೇಳೆ ಬಾಂಬ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಮಸೀದಿಯ ಇಮಾಮ್ ಕೂಡಾ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳಿಗೆ ಕಾಬೂಲ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.