Advertisement

ಕಾಬೂಲ್ ಮದರಸಾದಲ್ಲಿ ಬಾಂಬ್ ಸ್ಫೋಟ 20 ಮಂದಿ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

08:31 AM Aug 18, 2022 | Team Udayavani |

ಕಾಬೂಲ್​ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿರುವ ಮದರಸಾವೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದಾಗಿ 20 ಮಂದಿ ಮೃತಪಟ್ಟಿದ್ದು, 40ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದಾರೆ.

Advertisement

ಈ ಘಟನೆ ವಾಯುವ್ಯ ಕಾಬೂಲ್​ನ ಕೊತಾಲ್​-ಇ- ಖೈರ್​ ಖಾನಾದಲ್ಲಿ ಬುಧವಾರ ನಡೆದಿದೆ.

ಸಾಕಷ್ಟು ಸಾವು-ನೋವುಗಳು ಸಂಭವಿಸಿವೆ ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖೈರ್ ಖಾನಾ ಪ್ರದೇಶದ ಮದರಸಾದಲ್ಲಿ ಸಂಜೆ ಪ್ರಾರ್ಥನೆ ನಡೆಯಿತ್ತಿದ್ದ ವೇಳೆ ಬಾಂಬ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಮಸೀದಿಯ ಇಮಾಮ್ ಕೂಡಾ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳಿಗೆ ಕಾಬೂಲ್​ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next