ಹೈದರಾಬಾದ್: ಬಹುಮಹಡಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ಹುಡುಗಿಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಗುರುವಾರ ರಾತ್ರಿ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ವಪ್ನಲೋಕ ಕಾಂಪ್ಲೆಕ್ಸ್ ನ ಐದನೇ ಮಹಡಿಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ದಟ್ಟ ಹೊಗೆಯ ಸೇವನೆಯಿಂದ ದುರ್ದೈವಿಗಳು ಅಸುನೀಗಿದ್ದಾರೆ ಎಂದು ವರದಿ ತಿಳಿಸಿದೆ.
ಒಳಗಡೆ 13 ಮಂದಿ ಸಿಲುಕಿಕೊಂಡಿದ್ದರು. ಅವರಲ್ಲಿ ಏಳು ಮಂದಿಯನ್ನು ಸುರಕ್ಷಿತವಾಗಿ ಹೊರಗೆ ತರಲಾಗಿದೆ. ಉಳಿದ ಆರು ಜನ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:ಇಂದಿನಿಂದ ಭಾರತ-ಆಸೀಸ್ ಏಕದಿನ ಸರಣಿ ಆರಂಭ: ಮೊದಲ ಪಂದ್ಯಕ್ಕೆ ಹಾರ್ದಿಕ್ ನಾಯಕ
Related Articles
“ನಾಲ್ಕು ಹುಡುಗಿಯರು ಮತ್ತು ಇಬ್ಬರು ಹುಡುಗರು ಸೇರಿದಂತೆ ಇದುವರೆಗೆ ಆರು ಜನರು ಸಾವನ್ನಪ್ಪಿದ್ದಾರೆ. ಬೆಂಕಿ ಹೊತ್ತಿಕೊಂಡಾಗ ಈ ಜನರು ಒಳಗಿದ್ದರು. ಅವರನ್ನು ಹೊರತೆಗೆಯುವ ಹೊತ್ತಿಗೆ ಅವರು ಗಂಭೀರರಾಗಿದ್ದರು ಮತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರ. ನಾವು 7 ಮಂದಿಯನ್ನು ರಕ್ಷಿಸಿದ್ದೇವೆ” ಎಂದು ಉತ್ತರ ವಲಯ ಡಿಸಿಪಿ ಚಂದನಾ ದೀಪ್ತಿ ಹೇಳಿದರು.
ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಡಿಆರ್ಎಫ್ ಮತ್ತು ಪೊಲೀಸ್ ಅಧಿಕಾರಿಗಳು ಕೂಡ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರು ಅಪಘಾತದಲ್ಲಿ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.