ಇಸ್ಲಾಮಾಬಾದ್: ಪಾಕಿಸ್ತಾನ್ ಷೇರು ಪೇಟೆ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಸೋಮವಾರ (ಜುಲೈ 08) ನಡೆದಿದ್ದು, ತಾತ್ಕಾಲಿಕವಾಗಿ ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್
ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಬೆಂಕಿ ಹೊತ್ತಿಕೊಂಡಿರುವ ನಾಲ್ಕನೇ ಅಂತಸ್ತಿನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ದಳದ ಸಿಬಂದಿಗಳು ದೌಡಾಯಿಸಿರುವುದಾಗಿ ತಿಳಿಸಿದೆ.
ನಾಲ್ಕನೇ ಅಂತಸ್ತಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಿಟಕಿ ಮೂಲಕ ದಟ್ಟವಾದ ಕಪ್ಪು ಹೊಗೆ ಹೊರ ಬರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಅಗ್ನಿ ದುರಂತ ಸಂಭವಿಸಿದ ಘಟನೆ ತಿಳಿಯುತ್ತಿದ್ದಂತೆಯೇ ಷೇರು ಮಾರುಕಟ್ಟೆ ಕಟ್ಟಡದಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಪಾಕಿಸ್ತಾನ್ ಸ್ಟಾಕ್ ಎಕ್ಸ್ ಚೇಂಜ್ ಕಟ್ಟಡ ಬಿಗಿ ಪೊಲೀಸ್ ಬಂದೋಬಸ್ತ್ ಹೊಂದಿರುವ ಕರಾಚಿಯ ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನ್ ಮತ್ತು ಸೆಂಟ್ರಲ್ ಪೊಲೀಸ್ ಕಚೇರಿ ಸಮೀಪ ಇದ್ದಿರುವುದಾಗಿ ವರದಿ ವಿವರಿಸಿದೆ.