ಹಾಸನ: ಬಾಕಿ ಉಳಿಸಿಕೊಂಡಿರುವ 15 ತಿಂಗಳ ಪ್ರೋತ್ಸಾಹಧನವನ್ನು ಸರ್ಕಾರ ತಕ್ಷಣ ಪಾವತಿಸಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಅಪರ ಜಿಲ್ಲಾಧಿಕಾರಿ ಕವಿತಾ ಅವರಿಗೆ ಮನ ಸಲ್ಲಿಸಲಾಯಿತು.
ನಗರದ ಮಹಾರಾಜ ಪಾರ್ಕ್ ಮುಂಭಾಗದ ಹೇಮಾವತಿ ಪ್ರತಿಮೆ ಬಳಿ ಸಮಾವೇಶಗೊಂಡ ಆಶಾ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದರು.
ಸರ್ಕಾರ ಆಶಾ ಕಾರ್ಯಕರ್ತೆಯರ 15 ತಿಂಗಳ ಎಂಸಿಟಿಎಸ್ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದೆ. ನಮಗೆ ಪಾವತಿಯಾಗಬೇಕಾಗಿರುವ ಬಾಕಿ ಹಾಗೂ ಎಂಸಿಟಿಎಸ್ ಪ್ರೋತ್ಸಾಹ ಧನವನ್ನು ಪಾವತಿಸುವವರೆಗೂ ರಾಜ್ಯದಲ್ಲಿ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ಆಶಾ ಕಾರ್ಯಕರ್ತೆಯರು ಮನವಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಅನಿರ್ದಿಷ್ಟಾವಧಿ ಮುಷ್ಕರ: ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸಿದ್ದು, ನಮ್ಮ ಬೇಡಿಕೆ ಈಡೇರಿಸುವವರೆಗೂ ಕೆಲಸ ಸ್ಥಗಿತ ಮಾಡಲಾಗುವುದು. ನಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗ ಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜ. 3 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಆ ಸಂದರ್ಭದಲ್ಲಿ ಕೆಲ ಬೇಡಿಕೆಗಳನ್ನು ಈಡೇರಿ ಸುವುದಾಗಿ ಸರ್ಕಾರವು ಒಪ್ಪಿಕೊಂಡಿದೆ. ಅದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇವೆ. ಆದರೆ ಪ್ರಮುಖ ಬೇಡಿಕೆಗಳಲ್ಲಿ ಒಂದಾದ15 ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹಧನವನ್ನು ಪಾವತಿಸುವ ಬಗ್ಗೆ ಭರವಸೆ ನೀಡಿದೆ.
ಆದರೆ ಸರ್ಕಾರವು ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡು ವರೆಗೂ ರಾಜ್ಯದಲ್ಲಿ ಸೇವೆಯನ್ನು ಸ್ಥಗಿತ ಗೊಳಿಸುವುದಾಗಿ
ಸ್ಪಷ್ಟಪಡಿಸಿರುವ ಆಶಾ ಕಾರ್ಯಕರ್ತೆಯರು, ಬೇಡಿಕೆಗಳು ಈಡೇರುವವರೆಗೂ ಆರೋಗ್ಯ ಸೇವೆಗಳು, ತರಬೇತಿ ಮತ್ತು ಪರೀಕ್ಷೆಗಳು, ಸಭೆಗಳು ಸೇರಿದಂತೆ ನಮ್ಮ ಸ್ಥಗಿತಗೊಳಿಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.
ಎಐಯುಟಿಯುಸಿ ಜಿಲ್ಲಾ ಸಂಘಟಕ ಜಿ. ಹನುಮೇಶ್, ಮುಖಂಡರಾದ ಪುಷ್ಪಲತಾ, ಮಮತಾ, ರೆಹಮತ್, ಸರಸಮ್ಮ, ಗೌರಮ್ಮ, ಛಾಯಾ, ಭಾರತಿ, ಶಿವಮ್ಮ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.