Advertisement

2 ಎ ಮೀಸಲಾತಿಗೆ ಒತ್ತಾಯಿಸಿ ಬೊಮ್ಮಾಯಿ ನಿವಾಸದ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಧರಣಿ

12:56 PM Sep 20, 2022 | Team Udayavani |

ಶಿಗ್ಗಾವಿ: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸಿ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಂಡಿದ್ದು, ಇಲ್ಲಿನ ಚನ್ನಮ್ಮ ವೃತ್ತದಿಂದ ಮುಖ್ಯಮಂತ್ರಿ ನಿವಾಸದತ್ತ ಜನರು ಪ್ರತಿಭಟನಾ ಮೆರವಣಿಗೆ ಮೂಲಕ ತೆರಳುತ್ತಿದ್ದಾರೆ.

Advertisement

ಹಲವು ಮನವಿ ಗಡುವುಗಳ ನಂತರವೂ ಮೀಸಲಾತಿ ನೀಡುವ ಬಗ್ಗೆ ಸರಕಾರದಿಂದ ಯಾವುದೇ ಸಕರಾತ್ಮಕ ಸ್ಪಂದನೆ ದೊರೆಯದ ಕಾರಣ ಸಮಾಜದ ವತಿಯಿಂದ ಮುಖ್ಯಮಂತ್ರಿ ನಿವಾಸದ ಮುಂದೆ ಒಂದು ದಿನದ ಧರಣಿ ಹಮ್ಮಿಕೊಳ್ಳಲಾಗಿದೆ. ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಮಾಜದ ಬಾಂಧವರು ಮುಖ್ಯಮಂತ್ರಿ ನಿವಾಸದತ್ತ ತೆರಳುತ್ತಿದ್ದಾರೆ.

ಚನ್ನಮ್ಮ ವೃತ್ತದಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಹಸಿರು ಶಾಲು ಬೀಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಸರಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದರೆ. ಮೀಸಲಾತಿ ಪಡೆಯದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:ಭಾರತ, ಪಾಕ್ ಕ್ರಿಕೆಟ್ ಪಂದ್ಯದ ಬಳಿಕ ಬ್ರಿಟನ್ ನಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ

ಶ್ರೀ ಜಯಮೃತ್ಯುಂಜ ಸ್ವಾಮೀಜಿ ಮಾತನಾಡಿ, ಶಾಸಕ ಹಾಗೂ ಸಮಾಜದ ಮುಖಂಡರಾದ ಬಸವನಗೌಡ ಪಾಟೀಲ ಯತ್ನಾಳ ಅವರು ಅಧಿವೇಶನದಲ್ಲಿ ಇದ್ದಾರೆ.‌ ಅಲ್ಲಿ ಮುಖ್ಯಮಂತ್ರಿಗಳು ಏನು ಹೇಳುತ್ತಾರೆ ಎಂಬುವುದರ ಮೇಲೆ ಪ್ರತಿಭಟನೆ ನಿರ್ಧಾರವಾಗಲಿದೆ. ಅಕ್ಟೋಬರ್ ಕೊನೆಯ ವಾರ ಅಥವಾ ಮೊದಲ ವಾರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Advertisement

ಮಾಜಿ ಸಚಿವ ವಿನಯ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ, ಎಚ್.ಎಸ್.ಶಿವಶಂಕರ, ಸೋಮಣ್ಣ ಬೇವಿನಮರದ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next