Advertisement

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

07:35 PM Aug 19, 2022 | Team Udayavani |

ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಬಾದಾಮಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ ನಡೆಸಲಾಗಿದೆ.

Advertisement

ಬಾದಾಮಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆ ತಡೆದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಆಗಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು.

ಬೃಹತ್ ಪ್ರತಿಭಟನಾ ರ‍್ಯಾಲಿ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ರಸ್ತೆಯಲ್ಲಿ ಉರುಳಾಡಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಮತ್ತು ಗೃಹ ಸಚಿವ ವೈಫಲ್ಯದಿಂದ ಘಟನೆ ನಡೆದಿದೆ, ತಪ್ಪಿತಸ್ಥರ ವಿರುದ್ಧ ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next