Advertisement

ನ.11 ರಂದು ಕೇಂದ್ರದ ನೀತಿ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

10:00 AM Nov 08, 2019 | Team Udayavani |

ಬೆಂಗಳೂರು : ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್ 11 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ .

Advertisement

ರಾಜ್ಯದ ಎಲ್ಲಾ ಉದ್ಯಮಗಳಲ್ಲಿ ಉದ್ಯೋಗ ಕಡಿತ ಮಾಡಲಾಗುತ್ತಿದೆ. ಕೇಂದ್ರದ ತಪ್ಪು ನೀತಿಯಿಂದ ಸಂಸ್ಥೆಗಳು ಮುಚ್ಚುತ್ತಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉದ್ಯೋಗ ಕಡಿತ, ಉತ್ಪದಾನೆ ಕಡಿತದ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ಕೇಂದ್ರ ಸರ್ಕಾರ ಇದುವರೆಗೂ ಗಂಭೀರವಾಗಿ ಯೋಚನೆ.ಮಾಡಿಲ್ಲ .

ಅನರ್ಹ ಶಾಸಕರ ವಿಚಾರದಲ್ಲಿ ಸುಪ್ರೀಂ ತೀರ್ಪು ಬಂದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಲಿದ್ದೇವೆ, ಯಡಿಯೂರಪ್ಪ ಅವರ ವಿಡಿಯೊ ಪ್ರಕರಣದ ಕುರಿತು ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ. ದೇಶದಾದ್ಯಂತ ಬಿಜೆಪಿ ಪ್ರತಿಪಕ್ಷಗಳ ಶಾಸಕರನ್ನು ಆಪರೇಷನ್ ಕಮಲ ಮಾಡುವುದನ್ನೇ ಉದ್ಯೋಗ ಮಾಡಿಕೊಂಡಿವೆ . ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೆ ಇದರ ಹಿಂದೆ ಇರುವುದು ಬಯಲಾಗಿದೆ.

ಇದನ್ನು ಜನರಿಗೆ ಮುಟ್ಟಿಸುವ ಕೆಲಸ ಆಗಬೇಕು. ಈ ಸಂಬಂಧ ರಾಷ್ಟ್ರಪತಿಗಳನ್ನು ಭೇಟಿ ಮಾಡಲು ತೀರ್ಮಾನಿಸಿದ್ದೇವೆ. ಸಂವಿಧಾನ ರಕ್ಷಿಸುವ ಜವಾಬ್ದಾರಿ ರಾಷ್ಟ್ರಪತಿಯವರಿಗಿದೆ. ಇದರ ಜೊತೆಗೆ ಕಾನೂನು ಹೋರಾಟ ಮಾಡುವ ಕುರಿತಂತೆಯೂ ಚರ್ಚೆ ನಡೆಸಿದ್ದೇವೆ ಎಂದರು.

Advertisement

ನವೆಂಬರ್ 14 ರಂದು ಜವಾಹರ ಲಾಲ್ ನೆಹರು ಅವರ ೧೩೦ ನೇ ಜನ್ಮದಿನದ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆಚರಿಸಲು ತೀರ್ಮಾನಿಸಿದ್ದೇವೆ. ನವಭಾರತ ನಿರ್ಮಾತೃ ನೆಹರು ಅವರ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗುತ್ತಿದೆ ಹೀಗಾಗಿ ಜನರಿಗೆ ನೆಹರು ಬಗ್ಗೆ ತಿಳಿಸಲು ಅದ್ದೂರಿ ಕಾರ್ಯಕ್ರಮ ಮಾಡಲಾಗುವುದು.

ಯಡಿಯೂರಪ್ಪ ಟೇಪ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗೆ ಒಂದು ಮಾಹಿತಿಯಾಗಿ ನೀಡಿದ್ದೇವೆ. ಸರ್ಕಾರ ಉರುಳಿಸಲು ಪ್ರಯತ್ನ ನಡೆಸಿರುವ ಬಗ್ಗೆ ಅವರ ಆಡಿಯೋದಲ್ಲಿಯೆ ದಾಖಲೆ ಇದೆ. ದೇಶದಾದ್ಯಂತ ಬಿಜೆಪಿ ಇದೆ ಕೆಲಸ ಮಾಡುತ್ತಿದೆ.

ಅಮಿತ್.ಶಾ , ಯಡಿಯೂರಪ್ಪ ಸಂವಿಧಾನಿಕ ಹುದ್ದೆಯಲ್ಲಿ ಇರುವವರು, ಅವರು ಆ ಹುದ್ದೆಯಲ್ಲಿ ಮುಂದುವರೆಯಲು ಅರ್ಹತೆ ಇಲ್ಲ.

Advertisement

Udayavani is now on Telegram. Click here to join our channel and stay updated with the latest news.

Next