Advertisement
ಭಾರತೀಯ ಕಿಸಾನ್ ಪರಿಷತ್ ಸೋಮವಾರ ದೆಹಲಿಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿದ್ದು ಈ ನಡುವೆ ಪೊಲೀಸರು ರಸ್ತೆಯಲ್ಲಿ ಬ್ಯಾರಿಕೇಡ್ ಇಟ್ಟು ವಾಹನಗಳನ್ನು ಪರಿಶೀಲನೆ ನಡೆಸಿ ಬಿಡುತ್ತಿರುವುದರಿಂದ ಗಡಿಯಲ್ಲಿ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಅಲ್ಲದೆ ಟ್ರಾಫಿಕ್ ಜಾಮ್ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
Related Articles
Advertisement
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ನೇತೃತ್ವದಲ್ಲಿ ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ರೈತರನ್ನು ದೆಹಲಿಗೆ ಪ್ರವೇಶಿಸದಂತೆ ಭದ್ರತಾ ಪಡೆಗಳಿಂದ ನಿರ್ಬಂಧಿಸಲಾಗಿದೆ. ಡಿಸೆಂಬರ್ 6 ರಿಂದ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮೆರವಣಿಗೆ ನಡೆಯಲಿದ್ದು, ಹೆಚ್ಚಿನ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.