Advertisement

ಮಾಸ್ತಿ ಗ್ರಾಮ ಸಮಗ್ರ ಅಭಿವೃದ್ಧಿಗೆ ಒತ್ತು

04:45 PM Jun 07, 2022 | Team Udayavani |

ಮಾಸ್ತಿ: ಕನ್ನಡದ ಆಸ್ತಿ ಮೆರು ಸಾಹಿತಿ ಡಾ.ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ಅವರ ಮಾತೃಭಾಷೆ ತಮಿಳು ಆದರೂ ಕನ್ನಡದಲ್ಲಿ ಸಾಹಿತ್ಯವನ್ನು ರಚಿಸಿ ಕವಿಗಳಿಗೆ ಮಾರ್ಗದರ್ಶನವಾಗಿದ್ದಾರೆ. ಸಾಹಿತ್ಯ ಲೋಕಕ್ಕೆ ಡಾ.ಮಾಸ್ತಿ ಅವರ ಕೊಡುಗೆ ಅಪಾರ ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.

Advertisement

ಅವರು ಮಾಸ್ತಿ ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲಾ ಆವರಣದಲ್ಲಿ ಡಾ.ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ಟ್ರಸ್ಟ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ, ತಾಪಂನಿಂದ ಹಮ್ಮಿಕೊಂಡಿದ್ದ ಡಾ.ಮಾಸ್ತಿ ಅವರ 131ನೇ ಜನ್ಮದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾಸ್ತಿ ಅವರ ತವರೂರಾದ ಮಾಸ್ತಿ ಗ್ರಾಮವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವುದು ನಮ್ಮೆಲ್ಲರ ಜವಾಬ್ದಾರಿ. ಸಣ್ಣ ಕಥೆಗಳು, ನಾಟಕಗಳು, ಕೃತಿ, ಕಾದಂಬರಿಗಳನ್ನು ರಚಿಸಿ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಯುವ ಕವಿಗಳು ಮಾಸ್ತಿ ಅವರ ಕೃತಿಗಳು ಹಾಗೂ ಅವರ ಬದುಕು-ಬರಹದ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸವನ್ನು ಮಾಡಬೇಕಾಗಿದೆ. ಮಾಸ್ತಿ ಗ್ರಾಮದಲ್ಲಿ ಪ್ರತಿ ವರ್ಷವೂ ಡಾ.ಮಾಸ್ತಿ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮಾಸ್ತಿ ಗ್ರಾಮದ ಸಂಪೂರ್ಣ ಅಭಿವೃದ್ಧಿಗಾಗಿ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಅಲ್ಲದೆ, ಮಾಸ್ತಿ ಗ್ರಾಮದಲ್ಲಿ ಮಾಸ್ತಿ ಅವರ ಹೆಸರಿನಲ್ಲಿ 25 ಲಕ್ಷ ರೂಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇರ್ಶಕ ಹಾಗೂ ಟ್ರಸ್ಟಿನ ಸದಸ್ಯ-ಕಾರ್ಯದರ್ಶಿ ಎನ್‌.ನರೇಂದ್ರ ಬಾಬು, ತಹಶೀಲ್ದಾರ್‌ ಕೆ.ರಮೇಶ್‌, ಕಸಾಪ ಜಿಲ್ಲಾಧ್ಯಕ್ಷ ಎನ್‌.ಬಿ.ಗೋಪಾಲಗೌಡ, ಕವಿಮಾಸ್ತಿ ಕೃಷ್ಣಪ್ಪ ಮಾತನಾಡಿದರು.

ಇದೇ ವೇಳೆ ಮಾಸ್ತಿಯವರ ಸ್ಮರಣಾರ್ಥ ಮಾಸ್ತಿ ಅವರ ಬದುಕು ಬರಹ ಕುರಿತು ವಿದ್ಯಾರ್ಥಿಗಳಿಗೆ ಏರ್ಪಡಿಸಿದಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತಾಪಂ ಇಒ ಎನ್‌.ಮುನಿರಾಜು, ಮಾಸ್ತಿ ಗ್ರಾಪಂ ಅಧ್ಯಕ್ಷ ಜಿ.ಕೆ.ನಾಗರಾಜು, ಯೋಜನಾ ಪ್ರಾಧಿಕಾರ ಅಧ್ಯಕ್ಷ ಎಂ.ಪಿ.ಸತೀಶ್‌ ಆರಾಧ್ಯ, ಪುರಸಭೆ ಅಧ್ಯಕ್ಷೆ ಭವ್ಯ ಶಂಕರ್‌, ಉಪಾಧ್ಯಕ್ಷೆ ಭಾರತಿ, ಕಸಾಪ ತಾ ಅಧ್ಯಕ್ಷ ಎಂ.ವಿ.ಹನುಮಂತಯ್ಯ, ಮಾಜಿ ಜಿಲ್ಲಾ ಗೌರವ ಕಾರ್ಯದರ್ಶಿ ಎ.ಅಶ್ವಥ್‌ ರೆಡ್ಡಿ, ದೆಹಲಿ ಕನ್ನಡ ಸಂಘದ ಅಧ್ಯಕ್ಷ ಸಿ.ಎಂ.ನಾಗರಾಜು, ಅಕ್ರಂ ಪಾಷ, ಎಂ.ಸಿ.ನಾರಾಯಣಸ್ವಾಮಿ, ಹನುಮಪ್ಪ, ಚನ್ನರಾಯಪ್ಪ, ಮಧುಸೂಧನ್‌, ವಿಜಯನರಸಿಂಹ, ಸಿ.ಲಕ್ಷ್ಮೀನಾರಾಯಣ್‌ ಇತರರಿದ್ದರು.

Advertisement

ಮಾಸ್ತಿ ಗ್ರಾಮ ಸಂಪೂರ್ಣ ಅಭಿವೃದ್ಧಿ : ಮಾಸ್ತಿ ಅವರ ಜನ್ಮಸ್ಥಳವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಗ್ರಾಪಂಗೆ ಸಂಪೂರ್ಣ ಸಹಕಾರ ನೀಡಿದೆ. ಮಾಸ್ತಿ ಅವರ ಹೆಸರಿನಲ್ಲಿ 17 ಕೋಟಿ ರೂ.ಗಳಲ್ಲಿ ವಸತಿ ಶಾಲೆಯನ್ನು ನಿರ್ಮಾಣ ಮಾಡಲು ಈಗಾಗಲೇ ಸರ್ಕಾರದಿಂದ ಅನುದಾನ ನೀಡಿದ್ದು, ಶೀಘ್ರದಲ್ಲಿಯೇ ಭೂಮಿ ಪೂಜೆ ನೆರವೇರಿಸಲಾಗುವುದು. ಈ ಕಾಮಗಾರಿಯು 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಮಾಸ್ತಿ ಹುಟ್ಟಿದ ಊರಿನಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗೆ 4 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ ಸುಸಜ್ಜಿತ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ಮಾಸ್ತಿ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಒಂದೂವರೆ ಕೋಟಿ ರೂ.ಗಳನ್ನು ಸರ್ಕಾರದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next