Advertisement

ಮತ್ತೆ ‘ಮಠ’ಸೇರಿದ ‘ಗುರು’!

02:25 PM Jun 21, 2022 | Team Udayavani |

ಜಗ್ಗೇಶ್‌ ನಾಯಕರಾಗಿರುವ “ಮಠ’ ಚಿತ್ರದ ನಿಮಗೆ ಗೊತ್ತೇ ಇದೆ. ಗುರುಪ್ರಸಾದ್‌ ನಿರ್ದೇಶನದ ಈ ಚಿತ್ರ ತನ್ನ ವಿಭಿನ್ನತೆಯಿಂದ ಮೆಚ್ಚುಗೆ ಪಡೆದಿತ್ತು. ಈಗ ಅದೇ ಹೆಸರಿನಲ್ಲಿ ಚಿತ್ರವೊಂದು ಬರುತ್ತಿದೆ. ಈ ಚಿತ್ರಕ್ಕೂ “ಮಠ’ ಎಂದೇ ಹೆಸರಿಡಲಾಗಿದೆ.

Advertisement

ಹಾಗಂತ ಆ ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ರವೀಂದ್ರ ವೆಂಶಿ ಈ ಚಿತ್ರದ ನಿರ್ದೇಶಕರು. ಈ ಚಿತ್ರದಲ್ಲಿ “ಮಠ’ ನಿರ್ದೇಶಕ ಗುರುಪ್ರಸಾದ್‌ ಕೂಡಾ ನಟಿಸುತ್ತಿದ್ದಾರೆ. ಫಿಲಾಸಫಿಕಲ್, ಕಾಮಿಡಿ ಸತ್ಯ ಘಟನೆಯಾಧಾರಿತ ಮಠ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. ಬರೋಬ್ಬರಿ 82 ಜನ ಕಲಾವಿದರು ನಟಿಸಿರುವ ಈ ಚಿತ್ರದಲ್ಲಿ ಗುರು ಪ್ರಸಾದ್‌, ತಬಲನಾಣಿ, ಮಂಡ್ಯ ರಮೇಶ್‌, ಬಿರಾದಾರ್‌ ಸೇರಿದಂತೆ ಹಾಸ್ಯಕಲಾವಿದರ ದಂಡೇ ಇದೆ.

ಸುಮಾರು ಮೂರು ವರ್ಷಗಳ ಕಾಲ ಚಿತ್ರೀಕರಣ ನಡೆಸಿರುವ ಚಿತ್ರತಂಡ, 25 ಜಿಲ್ಲೆಗಳಲ್ಲಿ ವಿವಿಧ ಪ್ರವಾಸಿ ತಾಣಗಳಲ್ಲಿ ಕಥೆಗೆ ತಕ್ಕಂತೆ ಚಿತ್ರೀಕರಿಸಲಾಗಿದೆ. ಸುಮಾರು ಮುನ್ನೂರು ಮಠಗಳಲ್ಲಿ ಚಿತ್ರೀಕರಣ ನಡೆಸಲಾಗಿದೆಯಂತೆ.

ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ, ಮಠ ಸಿನಿಮಾ ಕಥೆಗೆ ಹೊಂದಿಕೆಯಾಗುತ್ತದೆ ಎಂಬ ಕಾರಣಕ್ಕೆ ಈ ಶೀರ್ಷಿಕೆ ಇಡಲಾಗಿದೆ. ಗುರು ಪ್ರಸಾದ್‌ ಇಲ್ಲದೇ ಮಠ ಅಪೂರ್ಣ. ಹೀಗಾಗಿ ಅವರನ್ನು ಕೇಳಿದೆವು ಅವರು ಗ್ರೀನ್‌ ಸಿಗ್ನಲ್‌ ಕೊಟ್ಟರು ಎಂದು ಚಿತ್ರದ ಬಗ್ಗೆ ಮಾತನಾಡುತ್ತಾರೆ.

ಸಾಧುಕೋಕಿಲಾ ಮಾತಾನಾಡಿ, ನಾನು ಸುಮಾರು ಮಾಡಿರಬಹುದು. ಆದರೆ, ಗುರುಪ್ರಸಾದ್‌ ಮಠ ಸಿನಿಮಾದಲ್ಲಿ ನಾನು ಒಂದೆರೆಡು ಸೀನ್‌ನಲ್ಲಿ ಮಾಡಿದ್ದೆ. ಅದು ಹಿಟ್‌ ಆಗಿತ್ತು. ಈಗ ಈ “ಮಠ’ದಲ್ಲಿ ಕಥಾವಸ್ತು ಬೇರೆ. ಇದು ನಿಜ ಜೀವನದ ಕಥೆ. ಒಂದೊಂದು ಪಾತ್ರವೂ ಕಥಾನಕ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

Advertisement

ಗುರು ಪ್ರಸಾದ್‌ ಮಾತಾನಾಡಿ, ಮನೆ ಕಟ್ಟುವುದು ಸುಲಭ. ಮಠದ ಕಟ್ಟುವುದು ಕಷ್ಟ. 290 ದಿನ ಪಯಣ ಮಾಡಿ ಮಠಗಳಿಗೆ ಭೇಟಿ ಕೊಟ್ಟು ಕಥೆ ಮಾಡಿ ಸಿನಿಮಾ ಮಾಡೋದು ಕಷ್ಟ. ಈ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದರು.

ಚಿತ್ರಕ್ಕೆ ಜೀವನ್‌ ಗೌಡ ಛಾಯಾಗ್ರಹಣ, ಸಿ.ರವಿಚಂದ್ರನ್‌ ಸಂಕಲನ, ವಿ ಮನೋಹರ್‌ ಸಂಗೀತ ನಿರ್ದೇಶನ, ಯೋಗರಾಜ್‌ ಭಟ್‌, ವಿ ನಾಗೇಂದ್ರ ಪ್ರಸಾದ್‌, ಗೌಸ್‌ ಫೀರ್‌ ಸಾಹಿತ್ಯ ಸಿನಿಮಾಕ್ಕಿದೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next