Advertisement

ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಸಿದ್ದು ಅರ್ಹರು

06:30 AM Apr 19, 2018 | Team Udayavani |

ಬೆಂಗಳೂರು:ಲಿಂಗಾಯತ ಸ್ವತಂತ್ರ ಧರ್ಮ ಸ್ಥಾಪನೆಗಾಗಿ ಕೇಂದ್ರಕ್ಕೆ ಶಿಫಾರಸು ಕಳುಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಅರ್ಹರು ಎಂದು ಬಸವಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ.

Advertisement

ಬುಧವಾರ ರಾಷ್ಟ್ರೀಯ ಬಸವ ದಳ ಪುರಭವನದಲ್ಲಿ ಹಮ್ಮಿಕೊಂಡಿದ್ದ ಬಸವಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತನಾಡಿದ ಅವರು,  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ-ಲಿಂಗಾಯತ ಧರ್ಮ ಒಡೆಯುತ್ತಿಲ್ಲ. ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಶೋಭಾ ಕರಂದ್ಲಾಜೆ ಅವರು ಪ್ರಚೋಧನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಈ ಹಿಂದೆ ಬೌದ್ಧ, ಜೈನ್‌, ಸಿಖ್‌ ಧರ್ಮದವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಸಿಕ್ಕಾಗ ಎಲ್ಲರೂ ಸ್ವಾಗತ ಮಾಡಿದರು. ಯಾರೊಬ್ಬರೂ ವಿರೋಧ ವ್ಯಕ್ತಪಡಿಸಲಿಲ್ಲ ಎಂದು ತಿಳಿಸಿದರು.

ಬಸವಣ್ಣ ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ವಿರೋಧ ವ್ಯಕ್ತಪಡಿಸುತ್ತಿರುವುದು ನ್ಯಾಯ ಸಮ್ಮತವಲ್ಲ. 30 ವರ್ಷಗಳ ಸತತ ಹೋರಾಟಗಳು ನಡೆಯುತ್ತಿದ್ದರೂ ನಮಗೆ ನ್ಯಾಯ ಸಿಕ್ಕಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದನೆ ನೀಡಿದೆ.  ಇದಕ್ಕೆ ಹಲವು ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದು ಏಕೆ ಎಂಬುದು  ತಿಳಿದಿದೆ ಎಂದರು.

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮುಂಚೂಣಿಯಲ್ಲಿರುವ ಮಠಾಧೀಶರ ಮತ್ತು ನೇತಾರರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವವರಿಗೆ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಲಿಂಗಾಯತ ಧರ್ಮದ ಇತಿಹಾಸವನ್ನು ಅರಿಯದ ಅವರು ರಾಜಕಿಯ ಪ್ರೇರಿತ ಅಭಿಪ್ರಾಯ ನೀಡಿದ್ದಾರೆ. ಹಿಂದೂ ಧರ್ಮವನ್ನು ಇಬ್ಭಾಗ  ಮಾಡಲು ಹೊರಟಿದ್ದಾರೆ ಎಂಬ ಅವರ ಹೇಳಿಕೆ ಹಾಸ್ಯಾಸ್ಪದ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next