Advertisement

ತಾಯಂದಿರ ಮರಣ ಪ್ರಮಾಣ ಇಳಿಮುಖ

11:43 PM Mar 11, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಹೆರಿಗೆ ವೇಳೆ ತಾಯಂದಿರ ಮರಣ ಪ್ರಮಾಣ ಇಳಿಮುಖವಾಗುತ್ತಿದ್ದು, ಕೇಂದ್ರ ಆರೋಗ್ಯ ಮಂತ್ರಾಲಯದ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗ ಬಿಡುಗಡೆ ಮಾಡಿದ ಎಸ್‌ಆರ್‌ಎಸ್‌ (ಸ್ಯಾಂಪಲ್‌ ರಿಜಿಸ್ಟ್ರೇಷನ್‌ ಸಿಸ್ಟಮ್ ) ರಾಜ್ಯಾವಾರು ಪಟ್ಟಿಯಲ್ಲಿ ಕರ್ನಾಟಕ 8ನೇ ಸ್ಥಾನ ಪಡೆದುಕೊಂಡಿದೆ.

Advertisement

ರಾಜ್ಯದಲ್ಲಿ ಗರ್ಭಿಣಿಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಇಲಾಖೆ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳಿಂದಾಗಿ ಹೆರಿಗೆ ಸಂದರ್ಭ ತಾಯಿಯ ಮರಣದ ಅನುಪಾತ ಸಾಕಷ್ಟು ಕಡಿಮೆಯಾಗುತ್ತಿದೆ.

ರಾಜ್ಯದಲ್ಲಿ 2015-2017ರಲ್ಲಿ 97, 2016-18ರಲ್ಲಿ 92, 2017-19ರಲ್ಲಿ 83 ತಾಯಂದಿರು ಮೃತಪಟ್ಟಿದ್ದಾರೆ. ಕಳೆದ ಸಾಲಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಶೇ. 9.78ಕ್ಕೆ ಇಳಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next