ಮಥುರಾ: ಉತ್ತರ ಪ್ರದೇಶದ ಮಥುರಾದ ಸ್ಥಳೀಯ ನ್ಯಾಯಾಲಯವು ಇಂದು ‘ಕೃಷ್ಣ ಜನ್ಮಭೂಮಿ’ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ಜನವರಿ 2ರ ನಂತರ ಮಾಡಲು ಆದೇಶ ನೀಡಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜನವರಿ 20 ರ ನಂತರ ವರದಿ ಸಲ್ಲಿಸಲು ಸೂಚಿಸಿದೆ.
ಹಿಂದೂ ಸೇನೆಯ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಮೊಕದ್ದಮೆಯ ಮೇಲೆ ನ್ಯಾಯಾಲಯವು ಇಂದು ಆದೇಶವನ್ನು ನೀಡಿದೆ.
ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ.
ಇದನ್ನೂ ಓದಿ:ದ್ವಿತೀಯ ಟೆಸ್ಟ್: ಭಾರತದ ಗೆಲುವಿಗೆ 145 ರನ್ ಗುರಿ ನೀಡಿದ ಬಾಂಗ್ಲಾದೇಶ
ಮಸೀದಿಯನ್ನು ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿಕೊಳ್ಳುವ ಹಿಂದೂ ಸಂಘಟನೆಗಳು 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆಗೆದುಹಾಕುವಂತೆ ಒತ್ತಾಯಿಸಿ ಮೊಕದ್ದಮೆ ಹೂಡಿದೆ.
ಶಾಹಿ ಈದ್ಗಾ ಮಸೀದಿಯನ್ನು 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯಲ್ಲಿ ಕತ್ರಾ ಕೇಶವ ದೇವ್ ದೇವಸ್ಥಾನದ 13.37 ಎಕರೆ ಆವರಣದಲ್ಲಿ ನಿರ್ಮಿಸಲಾಯಿತು ಎಂದು ವಿಷ್ಣು ಗುಪ್ತಾ ಅವರ ಅರ್ಜಿಯಲ್ಲಿ ತಿಳಿಸಲಾಗಿದೆ.