ಲಕ್ನೋ: ಜ್ಞಾನವಾಪಿ ಮಸೀದಿ ವಿವಾದದ ನಡುವೆಯೇ ಇದೀಗ ಉತ್ತರಪ್ರದೇಶದಲ್ಲಿ ಮತ್ತೊಂದು ಅರ್ಜಿ ಕೋರ್ಟ್ ಗೆ ಸಲ್ಲಿಕೆಯಾಗುವ ಮೂಲಕ ಗುರುವಾರ (ಮೇ 19) ಎಂಟು ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ : ಪ್ರಕರಣವೇನು?
ಮಥುರಾದ ಶ್ರೀಕೃಷ್ಣ ಜನ್ಮಭೂಮಿಗೆ ಸೇರಿದ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಶಾಹಿ ಈದ್ಗಾ ಮಸೀದಿಯನ್ನು ತೆರೆವುಗೊಳಿಸುವಂತೆ ಕೋರಿ ಉತ್ತರಪ್ರದೇಶಕ್ಕೆ ಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿರುವುದಾಗಿ ವರದಿ ತಿಳಿಸಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ಥಳದ ಕುರಿತು ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ಪೈಕಿ ಒಂದನ್ನು ವಿಚಾರಣೆ ನಡೆಸಲು ಕೋರ್ಟ್ ಸಮ್ಮತಿ ಸೂಚಿಸಿದೆ. ಕತ್ರಾ ಕೇಶವ್ ದೇವ್ ದೇವಾಲಯದ ಸ್ಥಳದಲ್ಲಿರುವ 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕೆಂದು ಕೋರಿ ಹಲವು ಹಿಂದೂಪರ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.
1669-1670ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಶ್ರೀಕೃಷ್ಣ ಜನ್ಮಭೂಮಿಯಲ್ಲಿ ಶಾಹಿ ಈದ್ಗಾ ಮಸೀದಿಯನ್ನು ಕಟ್ಟುವಂತೆ ಆದೇಶಿಸಿದ್ದ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಶ್ರೀಕೃಷ್ಣ ಜನ್ಮಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಿರುವುದು ಸರಿಯಲ್ಲ. ಹಲವು ವರ್ಷಗಳ ಹಿಂದೆ ಆಸ್ತಿಯನ್ನು ಹಂಚಿಕೆ ಮಾಡಿಕೊಳ್ಳುವ ಬಗ್ಗೆ ಹಲವು ಸಂಧಾನಗಳು ನಡೆದಿತ್ತು. ಆದರೆ ಈ ಸಂಧಾನ ಕಾನೂನು ಬಾಹಿರ ಎಂದು ಅರ್ಜಿದಾರರ ಪರ ವಕೀಲರಾದ; ಗೋಪಾಲ್ ಖಾಂಡೇಲ್ವಾಲ್ ತಿಳಿಸಿದ್ದಾರೆ.