Advertisement

ಹೈಕೋರ್ಟಲ್ಲೇ ಮಥುರಾ ದೇಗುಲ ಅರ್ಜಿ ವಿಚಾರಣೆ ನಡೀಲಿ: ಸುಪ್ರೀಂ

10:49 PM Mar 19, 2024 | Team Udayavani |

ನವದೆಹಲಿ: ಉ.ಪ್ರ.ದ ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ. ಸದ್ಯ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಎಲ್ಲಾ 15 ಅರ್ಜಿಗಳ ಕ್ರೋಢೀಕರಿಸಿ ವಿಚಾರಣೆ ಮುಂದುವರಿಸುವಂತೆ ಸೂಚಿಸಿದೆ.

Advertisement

15 ಅರ್ಜಿಗಳ ಕ್ರೋಢೀಕರಿಸಿ ವಿಚಾರಣೆ ನಡೆಸುವ ಅಲಹಾಬಾದ್‌ ಹೈಕೋರ್ಟ್‌ನ ನಿರ್ಧಾರವನ್ನು ಪ್ರಶ್ನಿಸಿ ಶಾಹಿ ಈದ್ಗಾ ಮಸೀದಿಯ ವ್ಯವಸ್ಥಾಪಕ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇತ್ಯರ್ಥಗೊಳಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸಂಜೀವ್‌ ಖನ್ನಾ ಮತ್ತು ನ್ಯಾ.ದೀಪಾಂಕರ್‌ ದತ್ತ ನೇತೃತ್ವದ ನ್ಯಾಯಪೀಠ, ಅಲಹಾಬಾದ್‌ ಹೈಕೋರ್ಟ್‌ನ ಜ.11ರ ಆದೇಶವನ್ನು ತಡೆಯವಂತೆ ಅರ್ಜಿದಾರರು ಕೋರಿದ್ದಾರೆ. ಆದರೆ ನಾವು ಈ ಅರ್ಜಿಯನ್ನು ವಿಲೇವಾರಿ ಮಾಡುತ್ತಿದ್ದು, ಈ ಕುರಿತು ಅಲಾಹಾಬಾದ್‌ ಹೈಕೋರ್ಟ್‌ ಎದುರು ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಲು ಅರ್ಜಿದಾರರು ಸ್ವತಂತ್ರರು ಎಂದಿದೆ.

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿಯ 13.37 ಎಕರೆ ವಿವಾದಿತ ಸ್ಥಳದ ಕುರಿತು ಹಿಂದೂ ಕಡೆಯ ವಿವಿಧ ಅರ್ಜಿದಾರರು ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಒಟ್ಟು 15 ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: Lok Sabha Election: ಬೆಳಗಾವಿ ಟಿಕೆಟ್ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದೇನು?

Advertisement
Advertisement

Udayavani is now on Telegram. Click here to join our channel and stay updated with the latest news.

Next