Advertisement
ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಕಾರ್ಯಕಾರಿಣಿ ಸಮಿತಿಯ ಆಡಳಿತ ಅವಧಿ ಮುಂದಿನ ವರ್ಷದ ಮಾರ್ಚ್‌ಗೆ ಅಂತ್ಯವಾಗಲಿದೆ. ನಂತರ ಚುನಾವಣೆ ನಡೆಯಬೇಕಿದ್ದು, ಸಾಹಿತ್ಯ ವಲಯದಿಂದ ದೂರ ಇದ್ದ ಅಧಿಕಾರಿಗಳು ಹಾಗೂ ಸಾಹಿತ್ಯ ವಲಯದೊಂದಿಗೆ ಸಂಪರ್ಕ ಹೊಂದಿದ್ದವರು ‘ಅಖಾಡ’ಕ್ಕೆ ಇಳಿಯಲು ಸಜ್ಜಾಗಿದ್ದಾರೆ.
Related Articles
Advertisement
ಇವರುಗಳಲ್ಲದೆ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಅಧ್ಯಕ್ಷ ಶೇಖರ ಗೌಡ ಮಾಲಿಪಾಟೀಲ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಕೂಡ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ.
ಸಾಹಿತ್ಯ ಸಮ್ಮೇಳನದಲ್ಲೇ ಪ್ರಚಾರ: ಈ ಹಿಂದೆ ಧಾರವಾಡದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಿಂದಲೇ ದೂರದರ್ಶನದ ನಿವೃತ್ತ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್‌ಜೋಶಿ ತಮ್ಮ ಪ್ರಚಾರವನ್ನು ಆರಂಭಿಸಿದ್ದರು. ಜತೆಗೆ ಕಲಬುರಗಿ ಸಾಹಿತ್ಯ ಸಮ್ಮೇಳನದಲ್ಲೂ ತಮ್ಮದೇ ಆದ ತಂಡ ಕಟ್ಟಿಕೊಂಡು ಪ್ರಚಾರ ನಡೆಸಿದ್ದರು.
ಕಸಾಪ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿರುವ ಮಹೇಶ್ ಜೋಶಿ, ಈ ಹಿಂದೆ ನನ್ನ ಆಡಳಿತ ಅವಧಿಯಲ್ಲಿ ದೂರದರ್ಶನ ಚಂದನ ಸಮೀಪ ದರ್ಶನವಾಯಿತು. ಅಂತೆಯೇ ಸಾಹಿತ್ಯ ಪರಿಷತ್ತನ್ನು ಜನ ಸಾಮಾನ್ಯರ ಪರಿಷತ್ತನ್ನಾಗಿ ಮಾಡಲು ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.
ಕನ್ನಡಪರ ಹೋರಾಟಗಾರ ಸಿ.ಕೆ.ರಾಮೇಗೌಡ, ಕಲಬುರಗಿಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದಿಂದಲೇ ಪ್ರಚಾರದ ಅಖಾಡಕ್ಕೆ ಇಳಿದಿದ್ದೇನೆ. ಹಿರಿಯ ಸಾಹಿತಿಗಳನ್ನು ಭೇಟಿ ಮಾಡುತ್ತಿದ್ದೇನೆ. ಇಡೀ ಉತ್ತರ ಕರ್ನಾಟಕವನ್ನು ಒಂದುಬಾರಿಪ್ರವಾಸ ಮಾಡಿಪ್ರಚಾರ ಮಾಡಿದ್ದೇನೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತನ್ನುಕಟ್ಟಿ ಬೆಳೆಸಲು ನಾಡಿನ ಹೆಸರಾಂತ ಸಾಹಿತಿಗಳು ಬೆವರು ಹರಿಸಿದ್ದಾರೆ. ಹೀಗಾಗಿ ಕನ್ನಡ ಸಾಹಿತ್ಯದಲ್ಲಿಕೃಷಿ ಮಾಡಿರುವವರು ಸಾಹಿತ್ಯ ಪರಿಷತ್ತಿನ ಚುಕ್ಕಾಣಿ ಹಿಡಿಯಬೇಕು.ಯಾವತ್ತೂಕೂಡಕನ್ನಡ ಸಾಹಿತ್ಯ ಪರಿಷತ್ತು ನಿವೃತ್ತ ಸರ್ಕಾರಿ ಅಧಿಕಾರಿಗಳ ವಿಶ್ರಾಂತಿ ತಾಣವಾಗಬಾರದು. –ಕೋ.ವೆಂ.ರಾಮಕೃಷ್ಣೇಗೌಡ, ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ
ಸ್ನೇಹಿತರ ಒತ್ತಾಸೆಯಂತೆ ಕಸಾಪ ಅಧ್ಯಕ್ಷ ಚುನಾವಣಾ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದೇನೆ.ಕೋವಿಡ್ ಹಿನ್ನೆಲೆಯಲ್ಲಿ ಪ್ರಚಾರ ಆರಂಭಿಸಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಪ್ರಚಾರಕೈಗೊಳ್ಳುತ್ತೇನೆ.- ಡಾ.ಸಿ.ಸೋಮಶೇಖರ್, ನಿವೃತ್ತ ಐಎಎಸ್ ಅಧಿಕಾರಿ
–ದೇವೇಶ ಸೂರಗುಪ್ಪ