ಬೆಂಗಳೂರು: ದ್ವೀಪರಾಷ್ಟ್ರ ಮಾರಿಷಸ್‌ನ 50ನೇ ಸ್ವಾತಂತ್ರ್ಯ ದಿನಾಚರಣೆ ಮಾ. 12ರಂದು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಮಾರಿಷಸ್ ಉಪಾಧ್ಯಕ್ಷ ಪರಮಶಿವಂ ಪಿಳ್ಳೆ„ ಹೇಳಿದ್ದಾರೆ.
ಭಾರತದೊಂದಿಗಿನ ಬಾಂಧವ್ಯವನ್ನು ಇನ್ನಷ್ಟು ವೃದ್ಧಿಸಿಕೊಳ್ಳಲು ಮಾರಿಷಸ್ ಬಯಸುತ್ತಿದೆ. ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾದ ಮೇಲೆ ಈ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ 50ನೇ ಸ್ವಾತಂತ್ರÂ ದಿನಾಚರಣೆಗೆ ಅವರನ್ನೇ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ ಎಂದರು.
ಮೈಸೂರಿನ ಜೆಎಸ್‌ಎಸ್ ಮಹಾವಿದ್ಯಾಪೀಠದಲ್ಲಿ ಶನಿವಾರ ನಡೆಯಲಿರುವ ಕೃಷಿ ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಪರಮಶಿವಂ ಪಿಳ್ಳೆ„, ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಆಹ್ವಾನದ ಮೇಲೆ ಶುಕ್ರವಾರ ವಿಧಾನಸೌಧಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾರಿಷಸ್‌ನ ಒಟ್ಟು ಜನಸಂಖ್ಯೆಯಲ್ಲಿ ಶೇ. 50ರಷ್ಟು ಭಾರತೀಯರಿದ್ದಾರೆ. ಅಲ್ಲಿ ಭಾರತದ ಎಲ್ಲಾ ಧರ್ಮಿಕ ಹಬ್ಬಗಳನ್ನು ಆಚರಿಸಲಾಗುತ್ತದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ನಾವು ಮಂಗಳೂರಿನಿಂದ ತರಿಸಿಕೊಳ್ಳುತ್ತೇವೆ ಎಂದು ಭಾರತದೊಂದಿಗಿನ ತಮ್ಮ ರಾಷ್ಟ್ರದ ಬಾಂಧವ್ಯವನ್ನು ವಿವರಿಸಿದರು.
ಇದುವರೆಗೆ ಕೃಷಿ, ಜವಳಿ ಮತ್ತಿತರ ಕ್ಷೇತ್ರದಲ್ಲಿ ಭಾರತದೊಂದಿಗೆ ವ್ಯವಹಾರ ನಡೆಸಲಾಗುತ್ತಿತ್ತು. ಇದೀಗ ಶಿಕ್ಷಣ ಮತ್ತು ಪ್ರವಾಸೋದ್ಯಮ ಕ್ಷೇತ್ರದಲ್ಲೂ ಪರಸ್ಪರ ಸಹಕಾರ ನೀಡಲಾಗುತ್ತಿದೆ. ಆ ನಿಟ್ಟಿನಲ್ಲಿ ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಮೈಸೂರಿನಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳುವ ಉದ್ದೇಶವೂ ಇದೆ ಎಂದರು.
ಇದಕ್ಕೂ ಮುನ್ನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ಮಾರಿಷಸ್ ಉಪಾಧ್ಯಕ್ಷ ಪರಮಶಿವಂ ಪಿಳ್ಳೆ„ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ರಾಜ್ಯದ ಶಾಸಕಾಂಗದ ಕುರಿತು ಸಮಾಲೋಚನೆ ನಡೆಸಿದರು. ಸಚಿವಾಲಯದ ಅಧಿಕಾರಿಗಳು, ಮಾರಿಷಸ್ ಅಧಿಕಾರಿಗಳು ಜತೆಗಿದ್ದರು.