Advertisement

ಬಳ್ಳಾರಿಯಲ್ಲಿ ಗರಿಷ್ಠ 40 ಡಿ. ಸೆ. ತಾಪಮಾನ

12:48 AM Mar 10, 2019 | |

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡಿನಾದ್ಯಂತ ಮತ್ತು ಉತ್ತರ ಒಳನಾಡಿನ ಬಹುತೇಕ ಎಲ್ಲೆಡೆ ಶನಿವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ ಅವಧಿಯಲ್ಲಿ ಗರಿಷ್ಠ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡುಬಂದಿಲ್ಲ. ಉತ್ತರ ಒಳನಾಡಿನ ಒಂದೆರಡು ಕಡೆ ತಾಪಮಾನ ಕೊಂಚ ಹೆಚ್ಚಾಗಿತ್ತು. ದಕ್ಷಿಣ ಒಳನಾಡಿನ ಒಂದೆರಡು ಕಡೆ ಕನಿಷ್ಠ ತಾಪಮಾನ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದರೆ, ಇನ್ನೂ ಕೆಲವೆಡೆ ಕೊಂಚ ಇಳಿಕೆಯಾಗಿತ್ತು. ಕರಾವಳಿಯ ಒಂದೆರಡು ಕಡೆ ಮತ್ತು ಒಳನಾಡಿನ ಕೆಲವೆಡೆ ಕನಿಷ್ಠ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡುಬಂದಿಲ್ಲ. ಬಳ್ಳಾರಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 40 ಡಿ. ಸೆ. ಹಾಗೂ ಚಿಕ್ಕನಹಳ್ಳಿ ಮತ್ತು ದಾವಣಗೆರೆಯಲ್ಲಿ ರಾಜ್ಯದಲ್ಲಿಯೇ ಕನಿಷ್ಠ 14 ಡಿ. ಸೆ. ತಾಪಮಾನ ದಾಖಲಾಗಿದೆ. ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next