ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಳೆ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Advertisement
ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ 4 ಮನೆಗಳು ಸಂಪೂರ್ಣ ಹಾನಿ ಗೊಳಗಾಗಿವೆ ಎಂದು ಅಧಿಕಾರಿಗಳು ನೀಡಿದ ಮಾಹಿತಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಭಾಗಶಃ ಹಾನಿಯಾದ ಮನೆಗಳು ಗರಿಷ್ಠ ಸಂಖ್ಯೆಯಲ್ಲಿದ್ದು, ಈ ಮನೆಗಳ ಹಾನಿಯ ಕುರಿತು ಪುನಃ ಪರಿಶೀಲಿಸಿ ಮನೆಯವರ ಅಭಿಪ್ರಾಯ ಪಡೆದು, ಗರಿಷ್ಠ ಮೊತ್ತದ ಪರಿಹಾರ ವಿತರಿಸುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಸೂಚಿಸಿದರು.
ಭತ್ತದ ಬೆಳೆ ಹಾನಿಗೆ ಸಂಬಂಧಿಸಿದಂತೆ ಇದುವರೆಗೆ 708 ಪ್ರಕರಣಗಳಲ್ಲಿ ಒಟ್ಟು 325 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಅಂದಾಜು 22 ಲ.ರೂ.ನಷ್ಟವಾಗಿದೆ. ತೋಟಗಾರಿಕಾ ಬೆಳೆಯಲ್ಲಿ 11.26 ಎಕ್ರೆಗೆ ಹಾನಿಯಾಗಿದ್ದು, ಅಂದಾಜು 14.64 ಲ.ರೂ.ನಷ್ಟವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಆರೋಗ್ಯ ಇಲಾಖೆ ಕಾರ್ಯಪ್ರವೃತ್ತವಾಗಲಿ
ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ ಅತಿವೃಷ್ಠಿಯಿಂದಾಗಿ ನೀರು ನಿಂತು ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು. ಲಾರ್ವಾ ಸರ್ವೇ ಕಾರ್ಯಕ್ಕೆ ಸ್ಥಳೀಯ ನರ್ಸಿಂಗ್ ವಿದ್ಯಾರ್ಥಿಗಳ ಸಹಾಯವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
Related Articles
Advertisement
ಕುಡಿಯುವ ನೀರು: ಅಗತ್ಯ ಕ್ರಮ ಕೈಗೊಳ್ಳಿಜಿಲ್ಲೆಯಲ್ಲಿ ಸಮುದ್ರ ಕೊರೆತ ತಡೆಯುವ ಕುರಿತಂತೆ ಸೂಕ್ತ ಯೋಜನೆ ರೂಪಿಸಿ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಸದರು ಸೂಚಿಸಿದರು. ಮುಂದಿನ ವರ್ಷಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಜಾಗೃತಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ, ಬಜೆ ಡ್ಯಾಮ್‌ನಲ್ಲಿ ತುಂಬಿರುವ ಹೂಳನ್ನು ತೆಗೆಯುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.