ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ನಾಗಾಲೋಟ ಪ್ರಾರಂಭಿಸಿರುವ ಬೆನ್ನಲ್ಲೆ ಲಸಿಕಾ ಅಭಿಯಾನ ಚುರುಕುಗೊಳಿಸಿರುವ ಕೇಂದ್ರ ಸರ್ಕಾರ, ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್-19 ಲಸಿಕೆ ಪಡೆಯಲು ಅರ್ಹರಾಗುತ್ತಾರೆ ಎಂದು ತಿಳಿಸಿದೆ.
ಇಂದು ಸಂಜೆ ಈ ಕುರಿತು ಪ್ರಕಟನೆ ಹೊರಡಿಸಿದ್ದು, ಮೇ 1 ರಂದು ಮೂರನೇ ಹಂತದ ಲಸಿಕಾ ಅಭಿಯಾನ ಶುರುವಾಗಲಿದ್ದು, 18 ವರ್ಷ ದಾಡಿದ ಎಲ್ಲರೂ ಲಸಿಕೆ ಪಡೆಯಲು ಸೂಚಿಸಿದೆ.
ಈ ಮೊದಲು 45 ವರ್ಷಕ್ಕಿಂತ ಮೇಲ್ಪಟ್ಟವರು ಕೋವಿಡ್ ಲಸಿಕೆ ಪಡೆಯುವಂತೆ ಸರ್ಕಾರ ಸೂಚಿಸಿತ್ತು. ಇದೀಗ ವಯಸ್ಸಿನ ಮೀತಿಯನ್ನು 18 ವರ್ಷಕ್ಕೆ ಇಳಿಸಿದೆ.
ಇನ್ನು ದೇಶಾದ್ಯಂತ ಪ್ರತಿನಿತ್ಯ ಲಕ್ಷಾಂತರ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, 21 ವರ್ಷ ಮೇಲ್ಪಟ್ಟ ವಯೋಮಾನದವರಿಗೂ ಲಸಿಕೆ ನೀಡಲು ಅನುಮತಿಸುವಂತೆ ಮನವಿ ಮಾಡಿದ್ದರು.