Advertisement

May 1: ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

11:20 PM Jan 28, 2024 | Team Udayavani |

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರ ಬುಧವಾರ ಗೋಧೂಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

Advertisement

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ, ಹೂವಿನ ಹಾರ ನೀಡಲಾಗುವುದು.

ಎರಡನೇ ವಿವಾಹಕ್ಕೆ ಅವಕಾಶವಿರು ವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದಲೇ ಭರಿಸಲಾಗುವುದು.

ವರದಕ್ಷಿಣೆ, ದುಂದುವೆಚ್ಚ ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಉಚಿತ ಸಾಮೂಹಿಕ ವಿವಾಹವನ್ನು 1972ರಲ್ಲಿ 1972ರಲ್ಲಿ ಆರಂಭಿಸಿದ್ದರು.

ಈತನಕ ಒಟ್ಟು 12,777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದಾರೆ. ವಿವಾಹಾಪೇಕ್ಷಿತರು ಎಪ್ರಿಲ್‌ 20ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08256-266644 ಸಂಪರ್ಕಿಸುವಂತೆ ಕ್ಷೇತ್ರದ ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next