Advertisement
ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಶನಿವಾರ ಹಲವೆಡೆ ತುಂತುರು ಮಳೆಯಾಗಿದೆ. ಮೋಡ ಕವಿದ ವಾತಾವರಣದೊಂದಿಗೆ ಕುಂದಾಪುರ, ಕಾರ್ಕಳ, ಉಡುಪಿ, ಕಾಪು, ಪಡುಬಿದ್ರಿ, ಬ್ರಹ್ಮಾವರ ಭಾಗದಲ್ಲಿ ಕೆಲವೆಡೆ ಸಣ್ಣದಾಗಿ ಮಳೆ ಸುರಿದಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 21 ಮತ್ತು 22ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಉತ್ತಮ ಗಾಳಿ ಮಳೆಯಾಗುವ ನಿರೀಕ್ಷೆ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮಾಹಿತಿಯಂತೆ ಶನಿವಾರದಂದು 30.8 ಡಿ.ಸೆ. ಗರಿಷ್ಠ ಮತ್ತು 22 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.