ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮೇ 24ರಿಂದ ಆರಂಭವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯು ತಿಳಿಸಿದೆ.
ಮೌಲ್ಯಮಾಪನ ಕಾರ್ಯಕ್ಕೆ ಸುಮಾರು 21 ಸಾವಿರ ಉಪನ್ಯಾಸಕರು ನೋಂದಣಿ ಮಾಡಿಕೊಂಡಿದ್ದಾರೆ. ಭಾನುವಾರ ಮತ್ತು ಸೋಮವಾರ ಉತ್ತರ ಪತ್ರಿಕೆಗಳ ಕೋಡಿಂಗ್ ನಡೆಯಲಿದೆ. ಮಂಗಳವಾರದಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ ಎಂದು ಪಿಯು ಇಲಾಖೆ ನಿರ್ದೇಶಕಿ (ಪರೀಕ್ಷೆಗಳು) ಶೈಲಜಾ ತಿಳಿಸಿದ್ದಾರೆ.
ಏ.22ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದೆ. ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಗೆ ಹೋಲಿಸಿಕೊಂಡರೆ ಕಲಾ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೈರು ಹಾಜರಾಗಿದ್ದಾರೆ.
ಇದನ್ನೂ ಓದಿ:ಆಲಮಟ್ಟಿ ಶಾಸ್ತ್ರೀ ಸಾಗರಕ್ಕೆ ಒಳ ಹರಿವು ಆರಂಭ: ಜೀವನದಿ ಕೃಷ್ಣೆಗೆ ಜೀವಕಳೆ
ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.